ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ನಾಳೆ (ಜೂನ್‌ 16)ಯಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಆಫ್ ಲೈನ್, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರು, ಶುಕ್ರವಾರದಿಂದ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಬಿಪಿಎಲ್, ಅಂತ್ಯೋದಯ ಕಾರ್ಡುದಾರರಿಗೆ ಈ ಯೋಜನೆ ಜಾರಿಯಾಗಲಿದೆ. ಆಧಾರ್ ಕಾರ್ಡ್ ಲಿಂಕ್ ಇರುವ ಮೊಬೈಲ್ ನಂಬರ್ ಇರಬೇಕು. ಮಹಿಳೆಯು ತನ್ನ ಆಧಾರ್ ಕಾರ್ಡ್, ಪತಿಯ ಆಧಾರ್ ಕಾರ್ಡ್ ನೀಡಬೇಕು.
ಅರ್ಜಿ ಸಲ್ಲಿಕೆಗೆ ಯಾವುದೇ ರೀತಿ ಶುಲ್ಕ ಪಡೆಯುವಂತಿಲ್ಲ. ಸೇವಾ ಸಿಂಧು ಪೋರ್ಟಲ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಯಾವುದೇ ಕಾಲಮಿತಿ ಇಲ್ಲ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ. ಆಗಸ್ಟ್ 18 ರಂದು ಬೆಳಗಾವಿಯಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು. ಯಾವುದೇ ಅನುಮಾನವಿದ್ದರೆ ಸಂಖ್ಯೆ 1092 ಸಂಪರ್ಕಿಸಬಹುದು ಎಂದು ಹೆಬ್ಬಾಳ್ಕರ ತಿಳಿಸಿದರು.

ಪ್ರಮುಖ ಸುದ್ದಿ :-   ಬೈಲಹೊಂಗಲ ಶಾಸಕರ ಕಾರು ಅಪಘಾತ

ಗೃಹ ಲಕ್ಷ್ಮೀ ಯೋಜನೆಗೆ ಅರ್ಹತಾ ಮಾನದಂಡಗಳು
* ಮಹಿಳೆಯರನ್ನು ಸಬಲೀಕರಣಗೊಳಿಸುವುದು ಕಾರ್ಯಕ್ರಮದ ಗುರಿಯಾಗಿದೆ, ಮತ್ತು ಪ್ರತಿ ಕುಟುಂಬಕ್ಕೆ ಒಬ್ಬ ಮಹಿಳೆ ಮಾತ್ರ ಅರ್ಜಿ ಸಲ್ಲಿಸಬಹುದು.
* ಈ ಯೋಜನೆಗೆ ಅರ್ಹರಾಗಲು, ಅರ್ಜಿದಾರರು ಕರ್ನಾಟಕದಲ್ಲಿ ವಾಸಿಸುತ್ತಿರಬೇಕು
* ಅರ್ಜಿದಾರರು ಕುಟುಂಬದ ಯಜಮಾನಿಯಾಗಿರಬೇಕು.
* ಬಿಪಿಎಲ್-ಅಂತ್ಯೋದಯ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಗೃಹ ಲಕ್ಷ್ಮೀ ಯೋಜನೆಗೆ ಅಗತ್ಯ ದಾಖಲೆಗಳು
ವಾಸಸ್ಥಳ ಪ್ರಮಾಣಪತ್ರ
ಮೊಬೈಲ್ ಸಂಖ್ಯೆ
2 ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರಗಳು
ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಮತದಾರರ ಐಡಿ ಕಾರ್ಡ್ ಇವೇ ಮೊದಲಾದ ಗುರುತಿನ ಪುರಾವೆಗಳು
ಪಡಿತರ ಚೀಟಿ, ನೀರಿನ ಬಿಲ್, ವಿದ್ಯುತ್ ಬಿಲ್ ಮುಂತಾದ ವಿಳಾಸ ಪುರಾವೆ
ಬ್ಯಾಂಕ್ ಪಾಸ್ ಬುಕ್ ನಕಲು
ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು.

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಯೋಜನೆಯ ಅಧಿಕೃತ ವೆಬ್‌ ಸೈಟಿಗೆ ಹೋಗಬೇಕು
ವೆಬ್ ಸೈಟ್ ನ ಮುಖಪುಟ ಪರದೆಯ ಮೇಲೆ ತೆರೆಯುತ್ತದೆ.
ಕರ್ನಾಟಕ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು
ನಂತರ, ಅರ್ಜಿ ನಮೂನೆಯ ಪ್ರಿಂಟ್ಔಟ್ ತೆಗೆದುಕೊಳ್ಳಬೇಕು
ವೈಯಕ್ತಿಕ ವಿವರಗಳು, ಬ್ಯಾಂಕ್ ವಿವರಗಳು ಮುಂತಾದ ಎಲ್ಲಾ ಅಗತ್ಯ ವಿವರಗಳೊಂದಿಗೆ ಅರ್ಜಿ ಫಾರ್ಮ್ ಅನ್ನು ಭರ್ತಿ ಮಾಡಬೇಕು
ನಂತರ, ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅರ್ಜಿ ಫಾರ್ಮಿಗೆ ಲಗತ್ತಿಸಬೇಕು
ಯಾವುದೇ ತಪ್ಪುಗಳನ್ನು ಆಗದಂತೆ ನೋಡಿಕೊಳ್ಳಲು ಮತ್ತೊಮ್ಮೆ ಅರ್ಜಿ ನಮೂನೆಯನ್ನು ಮರುಪರಿಶೀಲಿಸಿ
ಅರ್ಜಿ ನಮೂನೆಯನ್ನು ಗ್ರಾಮ ಪಂಚಾಯತ ಕೇಂದ್ರ ಅಥವಾ ಆಯಾ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಮತ್ತು ಪೂರಕ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement