ಬೆಂಗಳೂರು: ಮನೆ ಯಜಮಾನಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಯನ್ನು 4-5 ದಿನಗಳ ಕಾಲ ಮುಂದೂಡಿಕೆ ಮಾಡಲಾಗಿದೆ.
ಶುಕ್ರವಾರದಿಂದ ಆನ್‍ಲೈನ್ ಮತ್ತು ಆಫ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಧ್ಯಾಹ್ನವಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ತಿಳಿಸಿದ್ದಾರೆ. ಆದರೆ ಕ್ಯಾಬಿನೆಟ್ ಸಭೆ ನಂತರ ಶುಕ್ರವಾರ ಚಾಲನೆ ನೀಡಬೇಕಿದ್ದ ಗೃಹಲಕ್ಷ್ಮಿ ಯೋಜನೆ 4-5 ದಿನಗಳ ಕಾಲ ಮುಂದೂಡಿಕೆಗೆ ತೀರ್ಮಾನಿಸಲಾಗಿದೆ.
ಗೃಹಜ್ಯೋತಿ ಫಲಾನುಭವಿಗಳಿಗೆ ಹಿಂಬಾಕಿ ಕಟ್ಟಲು ಸೆಪ್ಟೆಂಬರ್ ವರೆಗೆ ಅವಕಾಶ ನೀಡಲಾಗಿದೆ. ಇ-ಗವರ್ನೆನ್ಸ್ ನವರು 2 ದಿನದಲ್ಲಿ ಅರ್ಜಿ ತುಂಬುವ ಅಪ್ಲಿಕೇಶನ್ ಸಿದ್ಧಪಡಿಸುತ್ತೇವೆ ಎಂದಿದ್ದರು. ಈಗ 4 ರಿಂದ 6 ದಿನ ಬೇಕು ಎಂದಿದ್ದಾರೆ. ಬಾಪೂಜಿ ಸೇವಾ ಕೇಂದ್ರದಲ್ಲೂ ಆನ್ಲೈನ್ ಅರ್ಜಿ ಪಡೆಯುವ ವ್ಯವಸ್ಥೆ ಇರಲಿದೆ. ಅವರಿಗೂ ತರಬೇತಿ ಕೊಡಬೇಕು. ಇದರ ಜೊತೆ ಸ್ವಯಂಸೇವಾ ಸಂಸ್ಥೆಗಳಿಗೂ ಆಹ್ವಾನ ನೀಡಿದ್ದೆವು. ಅವರು ಕೂಡ 4-5ರಿಂದ ದಿನ ಸಮಯ ನೀಡುವಂತೆ ಕೇಳಿದ್ದಾರೆ. ಹೀಗಾಗಿ ಸಂಪುಟ ಸದಸ್ಯರ ಸಲಹೆ ಮೇರೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ ಎಂದರು.ಹಾಗಾಗಿ ಯೋಜನೆ ಜಾರಿಗೆ 4-5 ದಿನ ಬೇಕಾಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ