ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ಕಾಯ್ದೆ ರದ್ದು: ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ 2022 ತಿದ್ದುಪಡಿ ರದ್ದು ಮಾಡಲು ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಸಭೆಯ ನಂತರ ಮಾಧ್ಯಮಕ್ಕೆ ತಿಳಿಸಿದ್ದಾರೆ. ಇದೇ ಅಧಿವೇಶನದಲ್ಲಿ ಅದಕ್ಕಾಗಿ ಹೊಸ ಕಾನೂನು ತಿದ್ದುಪಡಿ ವಿಧೇಯಕ.ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡನೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಎಪಿಎಂಸಿ ಕಾಯ್ದೆ ರದ್ದು…
ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಲು ನಿರ್ಧಾರ ಮಾಡಿದೆ. ಈ ಕಾಯ್ದೆ ಜಾರಿಯಿಂದ ರೈತರಿಗೆ ಹಾಗೂ ಅವಲಂಬಿತರಿಗೆ ನಷ್ಟವಾಗಿದೆ. ಈ‌ ಹಿನ್ನಲೆಯಲ್ಲಿ ಹಳೆ ಎಪಿಎಂಸಿ ಕಾಯ್ದೆಯನ್ನು ಕೆಲವೊಂದು ಮಾರ್ಪಾಡುಗಳ ಮಾಡಿ ಮುಂಬರುವ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ.
ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದು ಕಡ್ಡಾಯ
ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದು ಕಡ್ಡಾಯ ಮಾಡಿ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್ ಸಿ ಮಹಾದೇವಪ್ಪ ಮಾತನಾಡಿ, ಸರ್ಕಾರಿ ಕಚೇರಿಯಲ್ಲಿ ಸಂವಿಧಾನದ ಪೀಠಿಕೆ ಫೋಟೋ ಇಡಬೇಕು ಎಂದು ಸಂಪುಟದಲ್ಲಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಅಲ್ಲದೆ, *ಗೃಹ ಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಚಾಲನೆ ನೀಡುವುದನ್ನು ಮುಂದೂಡಲಾಗಿದೆ. ಕನಿಷ್ಠ ಒಂದು ವಾರ ವಿಳಂಬವಾಗುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್ : ಸಂತ್ರಸ್ತ ಮಹಿಳೆ ವೀಡಿಯೊ ವೈರಲ್‌

 

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement