ಗಂಗಾವತಿ: ಧಾರ್ಮಿಕ ಕಾರ್ಯಕ್ರಮದ ಪೆಂಡಾಲ್ ಕುಸಿದು ಮಹಿಳೆ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮುಸ್ಟೂರು ಕ್ಯಾಂಪ್ ನಲ್ಲಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಅಡುಗೆ ತಯಾರಿಸುತ್ತಿದ್ದ ಮಹಿಳೆಯ ಮೇಲೆ ಪೆಂಡಾಲ್ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ.
ಮೃತ ಮಹಿಳೆಯನ್ನು ಅಂಜಿನಮ್ಮ( 51) ಎಂದು ಗುರುತಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲು ಕಾರ್ಯಕ್ರಮದ ವೇದಿಕೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ಪೆಂಡಾಲ್ ಬಿರುಗಾಳಿಗೆ ಸಿಲುಕಿ ಹಾರಿ ಬಿದ್ದ ಪರಿಣಾಮ ಅಡುಗೆ ಕಾರ್ಯದಲ್ಲಿ ನಿರತರಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಶಾಮೀದಾಬೀ(48) ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಅಲ್ಲದೆ, ಶೃತಿ(23), ದುರ್ಗಮ್ಮ,(40), ಶಾರದಾ (30) ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಂಗಾವತಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಆದಿತ್ಯ ಎಲ್‌1, ಪ್ರೋಬಾ-3 ಉಪಗ್ರಹಗಳ ನೆರವಿನಿಂದ ಸೌರ ಸ್ಫೋಟಗಳ ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement