ಬೆಂಗಳೂರು : ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಜೂನ್ 20 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು, ಶುಕ್ರವಾರ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು. ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜೂನ್ 20 ರಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ಪಕ್ಷದ ನಾಯಕರು, ಶಾಸಕರು ಭಾಗವಹಿಸಲಿದ್ದಾರೆ. ಆ ಮೂಲಕ ಕೇಂದ್ರ ಸರ್ಕಾರದ ಗಮನಸೆಳೆಯಲಾಗುವುದು ಎಂದು ಹೇಳಿದ್ದಾರೆ.
ಮೊದಲು ಎಫ್ ಸಿಐ ಅಕ್ಕಿ ಕೊಡುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ನಂತರ ಅಕ್ಕಿ ಕೊಡಲು ಸಾಧ್ಯವಿಲ್ಲ ಎಂದು ಪತ್ರ ಬರೆಯಿತು. ಇದೊಂದು ದ್ವೇಷದ ರಾಜಕಾರಣ. ಬಿಜೆಪಿ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆದಿದೆ ಎಂದು ಡಿ.ಕೆ ಶಿವಕುಮಾರ್ ಕಿಡಿಕಾರಿದರು.


ನಿಮ್ಮ ಕಾಮೆಂಟ್ ಬರೆಯಿರಿ