ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ಕು ಮಂದಿ ಯುವಕರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿರುವ ರಾಜ್ಯ ಸರ್ಕಾರ ಈ ಸಂಬಂಧ ಶುಕ್ರವಾರ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ನಾಲ್ವರು ಹತ್ಯೆಗೀಡಾಗಿದ್ದರು. 2018ರ ಜನವರಿ 3ರಂದು ಕಾಟಿಪಾಳ್ಳದ ದೀಪಕ್ ರಾವ್, 2022ರ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಡಿಸೆಂಬರ್ 24ರಂದು ಕಾಟಿಪಾಳ್ಳದ ಅಬ್ದುಲ್ ಜಲೀಲ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಈ ನಾಲ್ವರ ಕುಟುಂಬಗಳಿಗೆ ಪರಿಹಾರ ಘೋಷಣೆ ಆಗಿರಲಿಲ್ಲ. ಈಗ ಈ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ