ಬಿಸಿಲಿನ ತೀವ್ರತೆ : ಬಲಿಯಾ ಆಸ್ಪತ್ರೆಗೆ ದಾಖಲಾದ 48 ಗಂಟೆಗಳಲ್ಲಿ ‘ತೀವ್ರ ಶಾಖ’ದಿಂದ 34 ಜನರು ಸಾವು

ಲಕ್ನೋ: ಕಳೆದ 24 ಗಂಟೆಗಳಲ್ಲಿ ಬಿಸಿಲಿನ ತೀವ್ರತೆಯಿಂದ ಅಸ್ವಸ್ಥಗೊಂಡು ಬಲ್ಲಿಯಾ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 34 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಜಿಲ್ಲೆಯಲ್ಲಿ ಬಿಸಿಲಿನ ಬೇಗೆ ಏರುತ್ತಿದ್ದು, ತೀವ್ರ ಶಾಖದಿಂದ ಜನ ತತ್ತರಿಸುತ್ತಿದ್ದಾರೆ. ಜನರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು” ಎಂದು ಮುಖ್ಯ ವೈದ್ಯಾಧಿಕಾರಿ (ಸಿಎಂಒ) ಡಾ.ಜಯಂತಕುಮಾರ ಮಾಹಿತಿ ನೀಡಿದ್ದಾರೆ.
ಎರಡು ದಿನದಲ್ಲಿ 34 ಮಂದಿ ಮೃತಪಟ್ಟಿದ್ದು, ಜೂನ್‌ 15ರಂದು 23 ಮಂದಿ ಹಾಗೂ ಜೂನ್‌ 16ರಂದು 11 ಮಂದಿ ಸಾವಿಗೀಡಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಮೃತರೆಲ್ಲರೂ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಇದರೊಂದಿಗೆ, ವಯಸ್ಸಾದವರಿಗೆ ಬಿಸಿಲಿನ ತಾಪವನ್ನು ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
ರೋಗಿಗಳು ಮತ್ತು ಆಸ್ಪತ್ರೆಯ ಸಿಬ್ಬಂದಿಗೆ ವಿಶ್ರಾಂತಿಗಾಗಿ ಮತ್ತು ಬಿಸಿಲಿನ ಶಾಖದ ಅಪಾಯವನ್ನು ತಡೆಗಟ್ಟಲು ಆಸ್ಪತ್ರೆಯಲ್ಲಿ ಫ್ಯಾನ್, ಕೂಲರ್ ಮತ್ತು ಹವಾನಿಯಂತ್ರಣಗಳನ್ನು ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ಅವರು ಹೇಳಿದರು.
ಹೀಟ್ ಸ್ಟ್ರೋಕ್ ತಡೆಗಟ್ಟಲು ಮುನ್ನೆಚ್ಚರಿಕೆಗಳನ್ನು ಜನ ಅನುಸರಿಸಬೇಕಾಗಿದೆ. ಬೇಸಿಗೆಯ ಬಿಸಿಲು, ತಾಪಮಾನ ಇವೆಲ್ಲಾ ನಿರ್ಜಲಿಕರಣ, ತಲೆಸುತ್ತು, ತಲೆನೋವು ಹೀಗೆ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ (ಸಿಎಂಎಸ್) ದಿವಾಕರ್ ಸಿಂಗ್ ಮಾಹಿತಿ ನೀಡಿದ್ದಾರೆ.
ಭಾರತೀಯ ಹವಾಮಾನ ದತ್ತಾಂಶ (IMD)ದ ಪ್ರಕಾರ “ಬಲ್ಲಿಯಾದಲ್ಲಿ ಶುಕ್ರವಾರ ಗರಿಷ್ಠ ತಾಪಮಾನ 42.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಸಾಮಾನ್ಯಕ್ಕಿಂತ 4.7 ಡಿಗ್ರಿ ಹೆಚ್ಚಾಗಿದೆ. ಕಳೆದ ವಾರದಿಂದ ಪಾದರಸವು 41 ಡಿಗ್ರಿ ಸೆಲ್ಸಿಯಸ್-ಮಾರ್ಕ್‌ಗಿಂತ ಹೆಚ್ಚಿದೆ.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ : ಸ್ವಾತಿ ಮಲಿವಾಲ್ ಹೊಸ ವೀಡಿಯೊ ಬಿಡುಗಡೆ ಮಾಡಿದ ಎಎಪಿ : ನಿಜವಾಗಿ ನಡೆದದ್ದು ಏನು..?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement