ಬೆಳಗಾವಿ: ಕಾಡಸಿದ್ದೇಶ್ವರ ಸ್ವಾಮೀಜಿ ಕಾರು ಅಪಘಾತ, ಇಬ್ಬರ ಸಾವು, ಸ್ವಾಮೀಜಿಗೆ ಗಂಭೀರ ಗಾಯ

ಬೆಳಗಾವಿ : ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಿದ್ದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಶನಿವಾರ ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಆಗಮಿಸುತ್ತಿದ್ದ ಶಿವಾಪುರ ಗ್ರಾಮದ ಮುಪ್ಪಿನ ಕಾಡ ಸಿದ್ದೇಶ್ವರ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗಳ ಕಾರು, ಎರಡು ಲಾರಿಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರಲ್ಲಿದ್ದ ಇಬ್ಬರು ಮೃತಪಟ್ಟಿದ್ದು ಸ್ವಾಮೀಜಿ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಾವಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹೊನಗಾ-ಬೆನ್ನಾಳ್ಳಿ ಸೇತುವೆ ಸನಿಹ ಎರಡು ಲಾರಿ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದೆ. ಮುಂದೆ ತೆರಳುತ್ತಿದ್ದ ಲಾರಿ ಚಾಲಕ ಒಮ್ಮೆಲೇ ಬ್ರೇಕ್ ಹಾಕಿದ್ದಾನೆ. ಈ ವೇಳೆ ಹಿಂದೆ ಬರುತ್ತಿದ್ದ ಅಲ್ಟೋ ಕಾರು ಲಾರಿಗೆ ಡಿಕ್ಕಿಯಾಗಿದೆ. ಈ ಸಮಯದಲ್ಲಿ ಅಲ್ಟೋ ಕಾರಿಗೆ ಹಿಂದಿನಿಂದ ಬಂದ ಮತ್ತೊಂದು ಲಾರಿ ಗುದ್ದಿದೆ ಎಂದು ಹೇಳಲಾಗಿದೆ. ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಶಿವಾಪುರ ಗ್ರಾಮದ ಮುಪ್ಪಿನ ಕಾಡ ಸಿದ್ದೇಶ್ವರ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಾಹನದಲ್ಲಿದ್ದ ಸ್ವಾಮೀಜಿಯ ಇಬ್ಬರು ಸಹಾಯಕರು ಮೃತಪಟ್ಟಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement