ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22ರಂದು ಕರ್ನಾಟಕ ಬಂದ್‌ ಗೆ ಕರೆ

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಕೆಸಿಸಿ&ಐ) ರಾಜ್ಯದಲ್ಲಿ ವಿದ್ಯುತ್ ಶುಲ್ಕ ಹೆಚ್ಚಳ ವಿರೋಧಿಸಿ ಜೂನ್ 22 ರಂದು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದೆ.
ಹೊಸ ವಿದ್ಯುತ್ ಶುಲ್ಕದ ಮೇಲಿನ ಪರಿಣಾಮದ ಬಗ್ಗೆ ಸರ್ಕಾರಕ್ಕೆ ತಿಳಿಸಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಬಂದ್‌ಗೆ ಕರೆ ನೀಡಲು ನಿರ್ಧರಿಸಲಾಗಿದೆ ಎಂದು ಒಕ್ಕೂಟ ತಿಳಿಸಿದೆ.
ವಿದ್ಯುತ್ ದರ ಏರಿಕೆ ಪರಿಣಾಮಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಮನವರಿಕೆ ಮಾಡಲು ಸಂಘದ ಎಲ್ಲಾ ಸದಸ್ಯರು ಮುಷ್ಕರದಲ್ಲಿ ಭಾಗವಹಿಸುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (KCCI&I) ಮನವಿ ಮಾಡಿದೆ.
ಜೂನ್ 22 ರಂದು ತಮ್ಮ ಸಂಸ್ಥೆಗಳನ್ನು ಮುಚ್ಚಲು ನಾವು ಎಲ್ಲಾ ವ್ಯಾಪಾರ ಸಂಸ್ಥೆಗಳು ಮತ್ತು ಕೈಗಾರಿಕೆಗಳಿಗೆ ವಿನಂತಿಸುತ್ತೇವೆ. ಎಸ್ಕಾಂನ ವಿದ್ಯುತ್ ಶುಲ್ಕದಲ್ಲಿ ಅಸಹಜ ಬೆಲೆ ಏರಿಕೆ ವಿರೋಧಿಸಿ ಮುಷ್ಕರ ನಡೆಯಲಿದೆ. ಕಳೆದ 8 ದಿನಗಳಿಂದ ವಿದ್ಯುತ್ ಶುಲ್ಕ ಹೆಚ್ಚಳದ ಪರಿಣಾಮದ ಗಂಭೀರತೆಯನ್ನು ತಿಳಿಸುವ ಪ್ರಯತ್ನ ಮಾಡಿದ್ದೇವೆ. ಆದರೆ, ಅಧಿಕಾರಿಗಳು ಅಥವಾ ಸರ್ಕಾರದ ಪ್ರತಿನಿಧಿಗಳಿಂದ ಯಾವುದೇ ಪರಿಹಾರ ದೊರೆಯುತ್ತಿಲ್ಲ” ಎಂದು ಸಂಸ್ಥೆ ಹೇಳಿದೆ.

ಪ್ರಮುಖ ಸುದ್ದಿ :-   ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

ಸರ್ಕಾರ ಈ ಬಗ್ಗೆ ಗಮನಹರಿಸಿ ವಿದ್ಯುತ್‌ ಶುಲ್ಕವನ್ನು ಕಡಿಮೆ ಮಾಡಲಿ ಎಂದು ಒಕ್ಕೂಟ ಆಶಿಸುತ್ತದೆ. ಸರ್ಕಾರದ ಗಮನ ಸೆಳೆಯಲು ನಾವು ಈ ಬಂದ್‌ಗೆ ಕರೆ ನೀಡಿದ್ದೇವೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಮೇ 12 ರಂದು ರಾಜ್ಯದಲ್ಲಿ ಪ್ರತಿ ಯೂನಿಟ್ ವಿದ್ಯುತ್‌ಗೆ 70 ಪೈಸೆ ದರವನ್ನು ಹೆಚ್ಚಿಸಿತ್ತು. ರಾಜ್ಯದಲ್ಲಿ ಹೊಸ ಸರ್ಕಾರವು ಚುನಾಯಿತವಾದ ನಂತರ ‘ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ’ (ಎಫ್‌ಪಿಪಿಸಿಎ) ನೆಪದಲ್ಲಿ ಪ್ರತಿ ಯೂನಿಟ್‌ಗೆ 51 ಪೈಸೆಯ ಮತ್ತೊಂದು ಹೆಚ್ಚಳವನ್ನು ಘೋಷಿಸಿದೆ.. ವಿದ್ಯುತ್ ಶುಲ್ಕ ಹೆಚ್ಚಳದ ವಿಚಾರವಾಗಿ ಸಿದ್ದರಾಮಯ್ಯ ಅವರು ಈ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿಲ್ಲ.ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement