ತೀರ್ಥಹಳ್ಳಿ : ತುಂಗಾ ನದಿಗೆ ಈಜಲು ತೆರಳಿದ್ದ ಇಬ್ಬರು ಉಪನ್ಯಾಸಕರು ನೀರುಪಾಲು

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿಯಲ್ಲಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಈ ಘಟನೆ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ತಂಗಿದ್ದರು. ತುಂಗಾ ನದಿಗೆ ಈಜಲು ತೆರಳಿದ್ದ ವೇಳೆ ಉಪನ್ಯಾಸಕರಾದ ಪುನೀತ (38) ಮತ್ತು ಬಾಲಾಜಿ (36) ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಮತ್ತೊಬ್ಬರಿಗಾಗಿ ಹುಡುಕಾಟ ನಡೆಸಿದ್ದು, ತೀರ್ಥಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement