ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ: ರಾಜ್ಯಾದ್ಯಂತ ಕಾವೇರಿ -2 ತಂತ್ರಾಂಶ ಜಾರಿ ; `ಆಸ್ತಿ ನೋಂದಣಿ’ ಮತ್ತಷ್ಟು ಸುಲಭ

ಬೆಂಗಳೂರು : ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಏಪ್ರಿಲ್​ನಿಂದ ನೋಂದಣಿ ಪ್ರಕ್ರಿಯೆಯಲ್ಲಿ ಕಾವೇರಿ-2 ಅಳವಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 251 ನೋಂದಣಿ ಕಚೇರಿಗಳಲ್ಲಿ ಇಂದು, ಸೋಮವಾರ (ಜೂನ್‌ 19) ಸಂಜೆಯೊಳಗೆ ಕಾವೇರಿ-2 ಜಾರಿಯಾಗಲಿದೆ. ಎಲ್ಲ ದಾಖಲೆಗಳನ್ನು ಕಾವೇರಿ-2ರಲ್ಲಿ ಸಲ್ಲಿಕೆ ಮಾಡಬಹುದು. ಸಬ್ ರಿಜಿಸ್ಟ್ರಾರ್ ಕೂಡ ಆನ್‌ ಲೈನ್ ​​ನಲ್ಲೇ ದಾಖಲೆ ಪರಿಶೀಲಿಸಲಿದ್ದಾರೆ. ನೋಂದಣಿ ಶುಲ್ಕವನ್ನೂ ಆನ್​​ ಲೈನ್​​ನಲ್ಲೇ ಸಲ್ಲಿಕೆ ಮಾಡಬಹುದು. ಇದರಿಂದ ರಾಜ್ಯ ಸರ್ಕಾರಕ್ಕೂ ನೋಂದಣಿ ಬಗ್ಗೆ ಮಾಹಿತಿ ಸಿಗುತ್ತದೆ. ಹಾಗೂ ಅಲ್ಲದೇ ಜಮೀನು ಅಕ್ರಮಗಳನ್ನು ಕೂಡ ತಡೆಯಬಹುದು ಎಂದು ಎಂದು ಮಾಹಿತಿ ನೀಡಿದರು.
ಜನರು ಹಾಗೂ ಸರ್ಕಾರದ ನಡುವೆ ನೋಂದಣಿ ಅತ್ಯಂತ ಪ್ರಮುಖ ಭಾಗವಾಗಿದೆ. ನೊಂದಣಿ ಇಲಾಖೆಯಲ್ಲಿ ಬಹಳ ಅಸ್ತವ್ಯಸ್ತತೆ ಇದೆ. ನೋಂದಣಿ ಸಂದರ್ಭದಲ್ಲಿ ಬಹಳಷ್ಟು ವಿಳಂಬ ಆಗುತ್ತಿದೆ. ಜನರು ಅವರ ಆಸ್ತಿ ಅವರು ಮಾರಾಟ ಮಾಡುವುದಕ್ಕೆ ಪಡಬಾರದ ಯಾತನೆ ಅನುಭವಿಸಿದ್ದಾರೆ. ಇದನ್ನು ಬಗೆಹರಿಸಲು ಕಾವೇರಿ-2 ಎಂಬ ಪದ್ಧತಿ ತರಲಾಗಿದೆ. ಕಾವೇರಿ-2 ವ್ಯವಸ್ಥೆ ಬಗ್ಗೆ ಅನುಕೂಲ-ಅನಾನುಕೂಲ ಎರಡೂ ಇದೆ ಎಂಬ ಮಾಹಿತಿ ಇದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಪ್ರಮುಖ ಸುದ್ದಿ :-   ಕಿನ್ನಿಗೋಳಿಯಲ್ಲಿ ಎರಡು ತಲೆಯ ಕರು ಜನನ

ನೋಂದಣಿ ಪ್ರಕ್ರಿಯೆಯಿಂದ 2022 ಮೇ 1024 ಕೋಟಿ ರೂ. ಆದಾಯ ಬಂದಿತ್ತು. 2023 ರ ಮೇದಲ್ಲಿ 1357 ಕೋಟಿ ರೂ. ಆದಾಯ ಬಂದಿದೆ. ಕಳೆದ ಜೂನ್ ತಿಂಗಳಲ್ಲಿ 721 ಕೋಟಿ ರೂ. ಆದಾಯ ಬಂದಿತ್ತು. ಈ ಜೂನ್ ನಲ್ಲಿ 840 ಕೋಟಿ ರೂ. ಆದಾಯ ಬಂದಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
ನೋಂದಣಿ ಇಲಾಖೆಯ ಗೈಡ್‌ಲೈನ್ಸ್‌ ವ್ಯಾಲ್ಯೂ 2018 ರಿಂದ ಪರಿಷ್ಕರಣೆ ಆಗಿಲ್ಲ. ಹೀಗಾಗಿ ರೈತರಿಗೂ ಮಾರಾಟಗಾರರಿಗೂ ಅನ್ಯಾಯ ಆಗುತ್ತಿದೆ. ಗೈಡ್‌ಲೈನ್ಸ್‌ ವ್ಯಾಲ್ಯೂ ರಿವಿಷನ್ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
“ಮಾರುಕಟ್ಟೆ ಮೌಲ್ಯಕ್ಕೆ ತಕ್ಕಂತೆ ಗೈಡೆನ್ಸ್ ಮೌಲ್ಯ ಬದಲಾವಣೆ ಮಾಡಬೇಕಿದೆ. ಆದರೆ ಅದನ್ನು ಒಂದೇ ಸಲ ಹೆಚ್ಚಳ ಮಾಡಲು ಆಗುವುದಿಲ್ಲ. ೀ ಬಗ್ಗೆ ಇನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement