ವಿಧಾನ ಪರಿಷತ್ ಚುನಾವಣೆ: ಜಗದೀಶ್ ಶೆಟ್ಟರ ಸೇರಿ ಮೂವರು ಅಭ್ಯರ್ಥಿಗಳ ಹೆಸರು ಘೋಷಿಸಿದ ಕಾಂಗ್ರೆಸ್‌

ಬೆಂಗಳೂರು: ಮೂರು ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 30 ಎಂದು‌ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ, ಸಚಿವ ಬೋಸರಾಜ ಹಾಗೂ ಕಲಬುರಗಿಯ ಹಿರಿಯ ಕಾಂಗ್ರೆಸ್ ನಾಯಕ ತಿಪ್ಪನ್ನಪ್ಪ ಕಮಕ್ನೂರು ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.ಮಂಗಳವಾರ *ಜೂನ್‌ 20 ವಿಧಾನ ಪರಿಷತ್ ಉಪ ಚುನಾವಣೆಗೆ  ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಕಾರಣ  ಈ ಮೂವರು ಅಭ್ಯರ್ಥಿಗಳು ನಾಳೆ ನಾಮಪತ್ರವನ್ನು ಸಲ್ಲಿಸಿದ್ದಾರೆ.
ವಿಧಾನಸಭೆ ಸದಸ್ಯರಿಂದ ಚುನಾಯಿರಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಮತ್ತು ಲಕ್ಷ್ಮಣ ಸವದಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಬಾಬುರಾವ್ ಚುಂಚನಸೂರು ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಸಭೆ ಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರು ಅವರ ಅವಧಿ 2024ರ ಜೂನ್ 17 ರ ವರೆಗೆ ಇರಲಿದೆ. ಇನ್ನು ಆರ್ ಶಂಕರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರು ಅವರ ಅವಧಿ 2026ರ ಜೂನ್ 30 ರವೆಗೂ ಇದೆ‌. ಲಕ್ಷ್ಮಣ ಸವದಿ ಅವರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧೆ ಮಾಡಿ ಅಥಣಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನ 2028ರ ಜೂನ್ 14 ರವೆಗೆ ಇರಲಿದೆ
ನಾಮಪತ್ರ ಸಲ್ಲಿಕೆ ಮಾಡಲು ನಾಳೆ( ಜೂನ್ 20) ಕೊನೆಯ ದಿನವಾಗಿದೆ. ಜೂನ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸಾತಿಗೆ ಜೂನ್ 23ರಂದು ಅಂತಿಮ ದಿನವಾಗಿದೆ. ಜೂನ್ 30ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಅದೇ ದಿನ ಸಂಜೆ ಫಲಿತಾಂಶ ಪ್ರಕಟವಾಗಲಿದೆ.

ಇಂದಿನ ಪ್ರಮುಖ ಸುದ್ದಿ :-   ವಿದ್ಯುತ್‌ ಉತ್ಪಾದನೆ ಸಾಮರ್ಥ್ಯಕ್ಕಿಂತ ಕಡಿಮೆಯಾಗಿದ್ದು ಏಕೆ? : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement