ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಈ ಲಿಂಕ್ ಬಳಸಿ

ಬೆಂಗಳೂರು : 2023ನೇ ಸಾಲಿನ ದ್ವಿತೀಯ ಪಿಯುಸಿ ಪೂಕರ ಪರೀಕ್ಷೆಯ ಫಲಿತಾಂಶ ಇಂದು, ಮಂಗಳವಾರ (ಜೂನ್ 20) ಫಲಿತಾಂಶ ಪ್ರಕಟವಾಗಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 1,57,756 ವಿದ್ಯಾರ್ಥಿಗಳ ಪೈಕಿ 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾಲೇಜುಗಳಲ್ಲಿ ಪೂರಕ ಪರೀಕ್ಷೆಯ ಫಲಿತಾಂಶ ಲಗತ್ತಿಸಲಾಗುತ್ತದೆ. https://karresults.nic.in/ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದಾಗಿದೆ.
. ಈ ಸಾಲಿನ ಪೂರಕ ಪರೀಕ್ಷೆಗಳು ಮೇ 23ರಿಂದ ಜೂನ್‌ 3ರ ವರೆಗೆ 304 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು. ಪೂರಕ ಪರೀಕ್ಷೆಗೆ ಒಟ್ಟು 1,58,881 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 1,57,756 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕಲಾ ವಿಭಾಗದಲ್ಲಿ 70,952 ವಿದ್ಯಾರ್ಥಿಗಳು ಹಾಜರಾಗಿದ್ದು, ಇದರಲ್ಲಿ 20,318 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 34, 293 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರಲ್ಲಿ 13,236 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 34,293 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 16,924 ಮಂದಿ ಉತ್ತೀರ್ಣರಾಗಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ 2023 ಡೌನ್‌ಲೋಡ್ ಮಾಡುವುದು ಹೇಗೆ?
ಹಂತ 1: karresults.nic.in ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
ಹಂತ 2: ಮುಖಪುಟದಲ್ಲಿ, ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶಕ್ಕಾಗಿ ಲಭ್ಯವಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ
ಹಂತ 3: ಹೊಸ ಪುಟವು ತೆರೆಯುತ್ತದೆ, ನೋಂದಣಿ ಸಂಖ್ಯೆ ಮತ್ತು ಇತರ ವಿವರಗಳನ್ನು ನಮೂದಿಸಿ
ಹಂತ 4: ದ್ವಿತೀಯ ಪಿಯುಸಿ 2023 ರ ಪೂರಕ ಫಲಿತಾಂಶ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ
ಹಂತ 5: ಭವಿಷ್ಯದ ಉಲ್ಲೇಖಕ್ಕಾಗಿ ಫಲಿತಾಂಶದ ಹಾರ್ಡ್ ಪ್ರತಿಯನ್ನು ಡೌನ್‌ಲೋಡ್ ಮಾಡಿ

ಇಂದಿನ ಪ್ರಮುಖ ಸುದ್ದಿ :-   ಇಂದಿನಿಂದ ಸೆಪ್ಟೆಂಬರ್‌ 30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement