ಕಾರವಾರ: ಶಾಲೆಯ ಆವರಣದಲ್ಲಿದ್ದ ವಿಷಕಾರಿ ಬೀಜ ಸೇವಿಸಿ 10ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಗುಂಡೊಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ.
ಶೇಂಗ ಬೀಜವೆಂದು ಭಾವಿಸಿ ಮಕ್ಕಳು ಶಾಲೆಯ ಆವರಣದಲ್ಲಿ ಬೆಳದಿದ್ದ ಕಾಡು ಜಾತಿಯ ಗಿಡದ ಬೀಜ ತಿಂದಿದ್ದಾರೆ. ತಿಂದ ಕೆಲ ಸಮಯದಲ್ಲಿಯೇ ಮಕ್ಕಳಿಗೆ ವಾಂತಿ ಬೇದಿ ಪ್ರಾರಂಭವಾಗಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಕಾಳಗಿನಕೊಪ್ಪ ಗ್ರಾಮದ ಸರಕಾರಿ ಆಸ್ಪತ್ರೆ ಹಾಗೂ ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ