ಅಮಿತ್ ಶಾ ಭೇಟಿ ಮಾಡಿದ ಸಿದ್ದರಾಮಯ್ಯ; ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ ಎಂದು ತಿಳಿಸಿದ ಸಿಎಂ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ರಾತ್ರಿ ಭೇಟಿ ಮಾಡಿದ್ದಾರೆ. ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಕುರಿತು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.
ಇದು ಸೌಹಾರ್ದ ಭೇಟಿಯಾಗಿದ್ದು, ಆದರೂ ರಾಜ್ಯದ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ. ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡುವ ಬಗ್ಗೆಯೂ ವಿಷಯ ಪ್ರಸ್ತಾಪಿಸಲಾಗಿದೆ. ” ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಊಟಕ್ಕೂ ತೊಂದರೆ ಕೊಡುತ್ತದೆ ಎಂದು ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದಾರೆ.
ಈ ಕುರಿತು ಗುರುವಾರ ಬೆಳಗ್ಗೆ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಜೊತೆ ಚರ್ಚಿಸುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ. ಅದಕ್ಕೂ ಮುನ್ನ ಸಿದ್ದರಾಮಯ್ಯ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಭೇಟಿಯಾದರು.
ಗೃಹಸಚಿವರ ಭೇಟಿಗೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,” ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆ ಈಡೇರಿಸುವ ಹಿನ್ನಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್ ಸಿ ಐ ಗೆ ಜೂನ್ 9 ರಂದು ಪತ್ರ ಬರೆಯಲಾಗಿತ್ತು. ಎಫ್ ಸಿ ಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯ ಕೋರಿರುವ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ತೊಂದರೆಯಿಲ್ಲ ಎಂದು ಜೂನ್ 12 ರಂದು ಪತ್ರ ಮುಖೇನ ತಿಳಿಸಿದ್ದರು ಎಂದು ತಿಳಿಸಿದರು.
ಆದರೆ, ಜೂನ್ 13 ರಂದು ಕೇಂದ್ರ ಆಹಾರ ಇಲಾಖೆಯವರು ಎಫ್ ಸಿ ಐ ಗೆ ಪತ್ರ ಬರೆದು ರಾಜ್ಯಗಳಿಗೆ ಕೇಂದ್ರದಿಂದ ಅಕ್ಕಿ ಸರಬರಾಜನ್ನು ನಿಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ನಂತರ ಜೂನ್ 14 ರಂದು ಎಫ್ ಸಿ ಐ ನ ಅಧ್ಯಕ್ಷರು ಪತ್ರ ಬರೆದು , ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement