ಉಳ್ಳಾಲ: ಬಸ್ ಚಾಲಕನ ಸಮಯಪ್ರಜ್ಞೆಯಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು : ಚಾಲಕನ ಸಮಯಪ್ರಜ್ಞೆ ಹಾಗೂ ಚಾಕಚಕ್ಯತೆಯಿಂದ ಪಾದಚಾರಿ ಮಹಿಳೆಯೊಬ್ಬರು ಬಸ್ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಉಳ್ಳಾಲದ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಮಂಗಳವಾರ ನಡೆದಿದೆ.
ಈ ಘಟನೆಯ ವೀಡಿಯೋ ವೈರಲ್ ಆಗಿದೆ. ಮಂಗಳವಾರ ತೌಡುಗೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಿಳೆಯು ರಸ್ತೆ ದಾಟಲು ಪ್ರಯತ್ನಿಸುತ್ತಿರುವುದನ್ನು ಇದು ತೋರಿಸುತ್ತದೆ, ಆದರೆ ರಸ್ತೆಯ ಮತ್ತೊಂದು ಕಡೆಯಿಂದ ಬಸ್ಸು ಬರುವುದನ್ನು ನೋಡದೆ ದಾಟಲು ಆ ಮಹಿಳೆ ಮುಂದಾಗಿರುವುದು ಕಂಡುಬರುತ್ತದೆ. ಆದರೆ ಎಚ್ಚೆತ್ತ ಚಾಲಕ ಸಮಯಕ್ಕೆ ಸರಿಯಾಗಿ ಬಸ್ಸನ್ನು ತಿರುಗಿಸಿ ಬ್ರೇಕ್ ಹಾಕಿದ್ದರಿಂದ ಅಕ್ಷರಶಃ ಕೂದಲೆಳೆಯ ಅಂತರದಲ್ಲಿ ಮಹಿಳೆ ಪಾರಾಗಿದ್ದಾರೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ, ಮಹಿಳೆ ಕೈಗೆ ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಮಂಗಳೂರು ಮುಡಿಪು ಮಧ್ಯೆ ಓಡಾಡುವ ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಬಸ್ ಚಾಲಕನ ಚಾಕಚಕ್ಯತೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕ್ಲಿಪ್‌ನಲ್ಲಿ ಕೆಲವರು ಆ ಮಹಿಳೆ ಚೆನ್ನಾಗಿದ್ದಾರೆಯೇ ಎಂದು ಎಂದು ಬಂದು ವಿಚಾರಿಸಿದ್ದಾರೆ.
ಈ ದೃಶ್ಯ ಬಸ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇಂದಿನ ಪ್ರಮುಖ ಸುದ್ದಿ :-   ಹೈದರಾಬಾದ್-ಬೆಂಗಳೂರು ವಂದೇ ಭಾರತ ರೈಲು ಸೆಪ್ಟೆಂಬರ್ 25 ರಿಂದ ಆರಂಭ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement