ಕೆಎಂಎಫ್‌ ಅಧ್ಯಕ್ಷರಾಗಿ ಭೀಮಾ ನಾಯ್ಕ್ ಅವಿರೋಧ ಆಯ್ಕೆ

ಬೆಂಗಳೂರು : ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಅಧ್ಯಕ್ಷರಾಗಿ ಕಾಂಗ್ರೆಸ್ಸಿನ ಮಾಜಿ ಶಾಸಕ ಭೀಮಾ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಜ್ಯದಲ್ಲಿ ಸರ್ಕಾರ ಬದಲಾವಣೆ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಇಂದು, ಬುಧವಾರ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿ ಮಾಡಲಾಗಿತ್ತು. ಭೀಮಾ ನಾಯ್ಕ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಎಂಎಫ್‌ ಆಡಳಿತ ಮಂಡಳಿಯ ಅಧಿಕಾರಾವಧಿ ಕೇವಲ 11 ತಿಂಗಳಷ್ಟೇ ಬಾಕಿಯಿದ್ದು, ಈ ಅವಧಿಗೆ ಹಗರಿಬೊಮ್ಮನಹಳ್ಳಿಯ ಮಾಜಿ ಶಾಸಕ ಭೀಮಾನಾಯ್ಕ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಗ್ರಾಮೀಣ ಪ್ರದೇಶದಿಂದ ಬಂದಿರುವ ಭೀಮಾನಾಯ್ಕ್ ಅವರು ಕೃಷಿಕರೂ ಹೌದು. ಒಟ್ಟು 14 ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟಗಳು ಕಾರ್ಯ ನಿರ್ವಹಿಸುತ್ತಿವೆ. ಈ 14 ಒಕ್ಕೂಟಗಳ ಅಧ್ಯಕ್ಷರಿಗೆ ಮಾತ್ರ ಚುನಾವಣೆಗೆ ಸ್ಪರ್ಧಿಸುವ ಮತ್ತು ಮತ ಚಲಾಯಿಸುವ ಹಕ್ಕು ಇದೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಬಾಲಚಂದ್ರ ಜಾರಕಿಹೊಳಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ನಾಗಮಂಗಲ ಬಳಿ ಕೆಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement