ಹಿರಿಯ ನಾಗರಿಕರಿಗೆ ಗುಡ್​ ನ್ಯೂಸ್ : 65 ವರ್ಷ ಮೇಲ್ಪಟ್ಟವರಿಗೆ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ನೇರವಾಗಿ ದೇವರ ದರ್ಶನಕ್ಕೆ ಅವಕಾಶ

ಬೆಂಗಳೂರು: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ‘ಎ’ ಮತ್ತು ‘ಬಿ’ ವರ್ಗದ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನೇರವಾಗಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ಪರಿಶೀಲನೆ ನಡೆಸಿದ ಧಾರ್ಮಿಕ ದತ್ತಿ ಇಲಾಖೆಯು ದೇವಸ್ಥಾನಗಳಲ್ಲಿ ಹಿರಿಯರಿಗೆ ನೇರ ದರ್ಶನ ಸೌಲಭ್ಯಕ್ಕೆ ಸೂಚನೆ ನೀಡಿದೆ. ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದೇವಾಲಯಗಳಾದ ‘ಎ’ ವರ್ಗ ಹಾಗೂ ‘ಬಿ’ ವರ್ಗ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯ ಒದಗಿಸುವ ಕುರಿತು ಬೆಂಗಳೂರಿನ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧವಂತರ ಒಕ್ಕೂಟ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯು ದೇವಸ್ಥಾನಗಳಲ್ಲಿ ಹಿರಿಯರಿಗೆ ನೇರ ದರ್ಶನ ಸೌಲಭ್ಯಕ್ಕೆ ಸೂಚನೆ ನೀಡಿದೆ.
ಇತ್ತೀಚಿನ ದಿನಗಳಲ್ಲಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಿಗೆ ಆಗಮಿಸುತ್ತಿರುವ ಭಕ್ತಾಧಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಹಿರಿಯ ನಾಗರೀಕರಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟಕರವಾಗಿರುವುದರಿಂದ, 65 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ಶೀಘ್ರ ದರ್ಶನಕ್ಕೆ ತಪ್ಪದೇ ಅಗತ್ಯ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ” ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಹೈದರಾಬಾದ್-ಬೆಂಗಳೂರು ವಂದೇ ಭಾರತ ರೈಲು ಸೆಪ್ಟೆಂಬರ್ 25 ರಿಂದ ಆರಂಭ

ಹಿರಿಯ ನಾಗರಿಕರು ಅವರ ವಯಸ್ಸಿನ ದಾಖಲೆ ಅಥವಾ ಆಧಾರ್ ತೋರಿಸಿದರೆ ಸರತಿ ಸಾಲಿನ ಅಗತ್ಯವಿಲ್ಲದೆ ನೇರವಾಗಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲು ಸೂಚಿಸಲಾಗಿದೆ.
ಸಹಾಯ ಕೇಂದ್ರ ಸ್ಥಾಪನೆ
ದೇವಾಲಯಗಳಲ್ಲಿ ಹಿರಿಯ ನಾಗರಿಕರಿಗಾಗಿ ಸಹಾಯ ಕೇಂದ್ರವನ್ನು ಸ್ಥಾಪಿಸಿ, ಹಿರಿಯ ನಾಗರಿಕರಿಗೆ ಸಹಕರಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವುದು. ಈ ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿ ನಿಯೋಜಿಸಿ ಹಿರಿಯ ನಾಗರಿಕರಿಗೆ ತ್ವರಿತ ದರ್ಶನ ಏರ್ಪಡಿಸಲು ಕ್ರಮ ಕೈಗೊಳ್ಳಬೇಕು ತಿಳಿಸಲಾಗಿದೆ. ಹಿರಿಯ ನಾಗರೀಕರು ಅವರ ವಯಸ್ಸಿನ ದಾಖಲೆ/ ಆಧಾರ ಕಾರ್ಡ್ ತೋರಿಸಿದಲ್ಲಿ ಅವರಿಗೆ ಶೀಘ್ರ ದರ್ಶನಕ್ಕೆ ಅನುಕೂಲವಾಗುವಂತ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಹಿರಿಯ ನಾಗರಿಕರಿಗೆ ನೇರ ದರ್ಶನಕ್ಕೆ ರಾಜ್ಯದ ಎಲ್ಲ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳಿಗೆ ಮಾತ್ರ ಸೀಮಿತವಾಗಿರಲಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ವಿದ್ಯುತ್‌ ಉತ್ಪಾದನೆ ಸಾಮರ್ಥ್ಯಕ್ಕಿಂತ ಕಡಿಮೆಯಾಗಿದ್ದು ಏಕೆ? : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement