ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ ಪಶ್ಚಿಮ ಬಂಗಾಳ ಮಾಜಿ ಸಿಎಂ ಪುತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ್ದಾರೆ. ಇತ್ತೀಚೆಗಷ್ಟೇ ಎಲ್‌ಜಿಬಿಟಿಕ್ಯೂ (LGBTQ) ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸುಚೇತನಾ ಶಸ್ತ್ರಚಿಕಿತ್ಸೆಗೆ ಒಳಗಾಗುವ ಮುನ್ನ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲು ಆರಂಭಿಸಿರುವುದಾಗಿ ಹೇಳಿದ್ದಾರೆ.
ಸುಚೇತನಾ ತಾನು ಪುರುಷ ಎಂದು ಈಗಾಗಲೇ ಗುರುತಿಸಿಕೊಂಡಿದ್ದೇನೆ ಮತ್ತು ದೈಹಿಕವಾಗಿಯೂ ಪುರುಷನಾಗಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ಈ ಬಗ್ಗೆ “ಇಂಡಿಯಾ ಟುಡೇ” ಜೊತೆ ಮಾತನಾಡಿರುವ ಅವರು, ” ನನಗೆ ನನ್ನ ಪೋಷಕರ ಗುರುತು ಅಥವಾ ಕುಟುಂಬದ ಗುರುತು ದೊಡ್ಡ ವಿಷಯವಲ್ಲ. ನನ್ನ ಎಲ್ಜಿಬಿಟಿಕ್ಯೂ( LGBTQ) ಚಳುವಳಿಯ ಭಾಗವಾಗಿ ನಾನು ಇದನ್ನು ಮಾಡುತ್ತಿದ್ದೇನೆ. ಟ್ರಾನ್ಸ್ ಮ್ಯಾನ್ ಆಗಿ ನಾನು ಪ್ರತಿದಿನ ಎದುರಿಸುತ್ತಿರುವ ಸಾಮಾಜಿಕ ಕಿರುಕುಳವನ್ನು ನಿಲ್ಲಿಸಲು ನಾನು ಬಯಸಿದ್ದೇನೆ. ನಾನು ವಯಸ್ಕನಾಗಿದ್ದೇನೆ. ನನಗೆ ಈಗ 41 ವರ್ಷ ಆಗಿದೆ, ನನ್ನ ಜೀವನಕ್ಕೆ ಸಂಬಂಧಿಸಿದ ಎಲ್ಲಾ ನಿರ್ಧಾರಗಳನ್ನು ನಾನೇ ತೆಗೆದುಕೊಳ್ಳಬಹುದು. ಹೀಗಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ವೀಡಿಯೊ | ಆಧುನಿಕ ಕಾಲದಲ್ಲಿ ಭಾರತದ ಹೊರಗಿನ ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ ಅಮೆರಿಕದ ನ್ಯೂಜೆರ್ಸಿಯಲ್ಲಿ ನಿರ್ಮಾಣ ; ಅಕ್ಟೋಬರ್ 8 ರಂದು ಉದ್ಘಾಟನೆ : ವಿಶೇಷತೆ ಇಲ್ಲಿದೆ..

ದಯವಿಟ್ಟು ನನ್ನ ಪೋಷಕರನ್ನು ಇದಕ್ಕೆ ಎಳೆದು ತರಬೇಡಿ. ಮಾನಸಿಕವಾಗಿ ತನ್ನನ್ನು ತಾನು ಪುರುಷನೆಂದು ಪರಿಗಣಿಸುವವನು ಸಹ ಮನುಷ್ಯನೇ, ನಾನು ಮಾನಸಿಕವಾಗಿ ಪುರುಷ ಎಂದು ಪರಿಗಣಿಸಿದ್ದೇನೆ. ಅದು ಈಗ ದೈಹಿಕವಾಗಿಯೂ ಪುರುಷನಾಗಬೇಕೆಂದು ನಾನು ಬಯಸಿದ್ದೇನೆ. ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ʼಸುಚೇತನಾʼ ದಿಂದ ‘ಸುಚೇತನ್’ ಆಗಲು ಬಯಸಿದ್ದೇನೆ ಈ ಸಂಬಂಧ ಕಾನೂನು ಸಲಹೆಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದೇನೆ ಮತ್ತು ಕಾರ್ಯವಿಧಾನಕ್ಕೆ ಅಗತ್ಯವಿರುವ ಎಲ್ಲಾ ಪ್ರಮಾಣ ಪತ್ರಗಳಿಗಾಗಿ ಮನೋವೈದ್ಯರನ್ನು ಸಂಪರ್ಕಿಸಿದ್ದೇನೆ ಎಂದು ಹೇಳಿದ್ದಾರೆ.
ನನ್ನನ್ನು ಬಾಲ್ಯದಿಂದಲೂ ಅರ್ಥ ಮಾಡಿಕೊಂಡ ನನ್ನ ಪೋಷಕರು ನನ್ನ ನಿರ್ಧಾರವನ್ನು ಬೆಂಬಲಿಸಬಹುದು ಎಂದು ಅವರು ಹೇಳಿದ್ದಾರೆ. ನನ್ನ ಈ ನಿರ್ಧಾರದ ಬಗ್ಗೆ ಯಾರು ಏನೇ ಹೇಳಿದರೂ ನಾನು ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲು ಸಿದ್ಧ. ದಯವಿಟ್ಟು ಮಾಧ್ಯಮಗಳು ಈ ಸುದ್ದಿಯನ್ನು ತಿರುಚುವುದು ಬೇಡ”ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

 

 

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ನಿವಾಸ ನವೀಕರಣ ಪ್ರಕರಣ : ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement