2 ಬಲ್ಬ್‌‌ ಇರುವ ವೃದ್ಧೆ ಮನೆಗೆ ಬರೋಬ್ಬರಿ 1 ಲಕ್ಷ ರೂ. ಕರೆಂಟ್ ಬಿಲ್ ..!

ಕೊಪ್ಪಳ : ಗೃಹಜ್ಯೋತಿ ಯೋಜನೆ ಅಡಿಯಲ್ಲಿ 200 ಯುನಿಟ್‌ ವಿದ್ಯುತ್‌ ಉಚಿತವಾಗಿ ನೀಡಲಾಗುವುದು ಎಂದು ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯದ ಹಲವೆಡೆ ಗ್ರಾಹರಕಿಗೆ ಹೆಚ್ಚಿನ ವಿದ್ಯುತ್‌ ಬಿಲ್‌ ಬರುತ್ತಿರುವ ಬಗ್ಗೆ ವರದಿಗಳಾಗುತ್ತಿವೆ. ಈಗ ಕೊಪ್ಪಳದಲ್ಲಿ ಶೆಡ್‌ನಲ್ಲಿ ವಾಸವಾಗಿರುವ ವೃದ್ಧೆಗೆ ಬರೋಬ್ಬರಿ 1ಲಕ್ಷ ರೂಪಾಯಿ ಬಿಲ್‌ ಬಂದಿದೆ…! ಬಿಲ್‌ ಕಂಡು ವೃದ್ಧೆ ಕಂಗಾಲಾಗಿದ್ದಾರೆ.
ಕೊಪ್ಪಳದ ಭಾಗ್ಯನಗರದಲ್ಲಿ ಸಣ್ಣ ತಗಡಿನ ಶೆಡ್​ನಲ್ಲಿ ವಾಸವಾಗಿರುವ 90 ವಯಸ್ಸಿನ ಗಿರಿಜಮ್ಮ ಎಂಬ ವೃದ್ಧೆ ಮನೆಗೆ ಭಾಗ್ಯ ಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡಿದ್ದರು. ಮನೆಯಲ್ಲಿ ಎರಡು ಬಲ್ಬ್ ಮಾತ್ರ ಇವೆ. ಆದರೂ 6 ತಿಂಗಳಲ್ಲಿ ಬರೋಬ್ಬರಿ 1 ಲಕ್ಷ ರೂ. ಬಿಲ್​ ಬಂದಿದೆ. ಆರು ತಿಂಗಳ ಹಿಂದೆ ವೃದ್ಧೆಯ ಮನೆಗೆ ಜೆಸ್ಕಾಂ ಸಿಬ್ಬಂದಿ ಮೀಟರ್ ಅಳವಡಿಸಿದ್ದು, ಅದರ ನಂತರದಲ್ಲಿ 6 ತಿಂಗಳಲ್ಲಿ ಅಜ್ಜಿ ಮನೆಗೆ ಬರೋಬ್ಬರಿ 1,03,315 ರೂ. ವಿದ್ಯುತ್ ಬಿಲ್ ಬಂದಿದೆ ಎಂದು ಹೇಳಲಾಗಿದೆ. ಆರ್ಥಿಕ ತೊಂದರೆ ಇದೆ ಎಂಬ ಕಾರಣಕ್ಕೆ ಭಾಗ್ಯ ಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಸಂಪರ್ಕ ಪಡೆದಿರುವ ಅಜ್ಜಿ, ಇದೀಗ 1 ಲಕ್ಷ ರೂ. ವಿದ್ಯುತ್ ಬಿಲ್ ನೋಡಿ ಕಣ್ಣೀರಿಟ್ಟಿದ್ದಾಳೆ.
ವೃದ್ಧೆ ಮನೆಗೆ ಒಂದು ಲಕ್ಷ ವಿದ್ಯುತ್‌ ಬಿಲ್‌ ಬಂದಿರುವ ಬಗ್ಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ಪ್ರತಿಕ್ರಿಯಿಸಿದ್ದು, ಕೊಪ್ಪಳದಲ್ಲಿ ಅಜ್ಜಿ ಮನೆಗೆ 1 ಲಕ್ಷ ರೂ. ಕರೆಂಟ್​ ಬಿಲ್​ ಬಂದಿದೆ. ಮೀಟರ್​ ಸಮಸ್ಯೆಯಿಂದ 1 ಲಕ್ಷ ರೂ. ಕರೆಂಟ್​ ಬಿಲ್​ ಬಂದಿದೆ. ಅಜ್ಜಿ‌ ಕರೆಂಟ್​​ ಬಿಲ್​​ ಕಟ್ಟಬೇಕಿಲ್ಲ ಎಂದು ಹೇಳಿದ್ದಾರೆ.
ಗಿರಿಜಮ್ಮ ಮನೆಗೆ ಜೆಸ್ಕಾಂ ಅಧಿಕಾರಿಗಳು ಈಗಾಗಲೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 2021ರಿಂದ ಮೀಟರ್ ರೀಡಿಂಗ್ ತೊಂದರೆಯಿಂದ ಬಿಲ್ ಬಂದಿದೆ. ಅಜ್ಜಿ ಗಿರಿಜಮ್ಮ ವಿದ್ಯುತ್​​ ಬಿಲ್ ಪಾವತಿ ಮಾಡುವ ಅವಶ್ಯಕತೆ ಇಲ್ಲ. ನಮ್ಮ ಸಿಬ್ಬಂದಿ ಹಾಗೂ ಬಿಲ್ ಕಲೆಕ್ಟರ್ ತಪ್ಪಿನಿಂದಾಗಿ ಹೀಗಾಗಿದೆ. ಇಂತಹ ಯಾವುದೇ ಪ್ರಕರಣಗಳಿದ್ದರೂ ನಮ್ಮ ಗಮನಕ್ಕೆ ತನ್ನಿ ಎಂದು ಕೊಪ್ಪಳ ಜೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಜಗತ್ತಿಗೆ ಹೇಳುವ ಮೊದಲೇ ಪಾಕಿಸ್ತಾನಕ್ಕೆ ತಿಳಿಸಿದ್ದೆ ; ಬಾಲಾಕೋಟ್ ಸ್ಟ್ರೈಕ್ ಬಗ್ಗೆ ಬಿಚ್ಚಿಟ್ಟ ಪ್ರಧಾನಿ ಮೋದಿ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement