ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ; ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ ಕರೆದು ಸಂವಿಧಾನಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪಂಚಮಸಾಲಿ ಸಮುದಾಯವನ್ನು 2ಎ ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸಲು ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಂಚಮಸಾಲಿ ಶಾಸಕರ ನಿಯೋಗವು ಶುಕ್ರವಾರ ಅವರನ್ನು ಭೇಟಿ ಮಾಡಿ ಮನವಿ ಮಾಡಿತು.
ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು ಎಂದು ಎಂದು ಸ್ವಾಮೀಜಿ ಮನವಿ ಮಾಡಿದರು.
ಮೀಸಲಾತಿ ವಿಚಾರವಾಗಿ ಆತುರದ ನಿರ್ಧಾರ ಸಲ್ಲದು. ಸಂವಿಧಾನಾತ್ಮಕ ಹಾಗೂ ಕಾನೂನಿನ ಚೌಕಟ್ಟಿನಲ್ಲಿ ತೀರ್ಮಾನ ಮಾಡಬೇಕು. ಹಾಗಾಗಿ ಈ ಬಗ್ಗೆ ಕಾನೂನು ತಜ್ಞರ ಸಭೆ ಕರೆದು ಕೂಲಂಕಷವಾಗಿ ಚರ್ಚಿಸಲಾಗುವುದು” ಎಂದು ಭರವಸೆ ನೀಡಿದರು. ಸಭೆಯಲ್ಲಿ ಸಮುದಾಯದ 15 ಮಂದಿ ಶಾಸಕರು ಹಾಗೂ ಪಂಚಮಸಾಲಿ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement