ರಾಮನಗರ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿಯಂತೆ ಹೆಚ್ಚು ಸ್ಥಾನಗಳನ್ನು ಗೆಲ್ಲಲು ರಾಜ್ಯದಲ್ಲಿ ಬಿಜೆಪಿಯು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹದ ಮಧ್ಯೆ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಈ ಬಗ್ಗೆ ಸುಳಿವು ನೀಡಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಮುಂದೆ ಮಹತ್ವದ ಬದಲಾವಣೆಯಾಗಬಹುದು. ಜೆಡಿಎಸ್ ಜೊತೆ ಹೊಂದಾಣಿಕೆ ಆಗಬಹುದು. ಬದಲಾವಣೆಯೊಂದಿಗೆ ಚುನಾವಣೆ ಎದುರಿಸುತ್ತೇವೆ. ಈಗಾಗಲೇ ಈ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ. ಜೆಡಿಎಸ್ ಜತೆ ಮೈತ್ರಿ ಆಗಲೂಬಹುದು ಅಂದಿಕೊಂಡಿದ್ದೇನೆ. ಆದರೆ ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ತಿಳಿಸಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಗೆ ತಯಾರಿ ಆಗಬೇಕು. ಅತಿ ಹೆಚ್ಚು ಸಂಸದರನ್ನು ಲೋಕಸಭೆಗೆ ಕಳುಹಿಸಬೇಕು. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪಕ್ಷ ಹೇಳಿದರೆ ಸ್ಪರ್ಧಿಸುತ್ತೇನೆ. ಲೋಕಸಭೆ ಟಿಕೆಟ್ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ಸಿ.ಪಿ ಯೋಗೇಶ್ವರ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ