ಜೂನ್​ 27ರಿಂದ ಬೆಂಗಳೂರು-ಧಾರವಾಡ ವಂದೇ ಭಾರತ ಎಕ್ಸ್​​ಪ್ರೆಸ್ ರೈಲು ಸಂಚಾರ ಆರಂಭ : ವೇಳಾಪಟ್ಟಿ ಹೀಗಿದೆ

ಹುಬ್ಬಳ್ಳಿ : ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಜೂನ್ 27 ರಂದು ಉದ್ಘಾಟಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಜೂನ್ 27ರಂದು ಧಾರವಾಡದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ನಂತರ ನಿಯಮಿತ ಸೇವೆಗಳು ಮುಂದುವರಿಯಲಿದೆ.
ಪ್ರಧಾನಿ ನರೇಂದ್ರ ಮೋದಿ ಜೂನ್ 27 ರಂದು ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡುವ ನಿರೀಕ್ಷೆಯಿದೆ. ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ.
20661 ಕೆಎಸ್ಆರ್ ಬೆಂಗಳೂರು ನಗರ-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಬೆಂಗಳೂರಿನಿಂದ ಬೆಳಿಗ್ಗೆ 5:45 ಕ್ಕೆ ಹೊರಟು ಮಧ್ಯಾಹ್ನ 12:10ಕ್ಕೆ ದಾವಣೆಗೆರೆ, ಹುಬ್ಬಳ್ಳಿ ಮೂಲಕ ಧಾರವಾಡ ತಲುಪಲಿದೆ. 20662 ಕೆಎಸ್ಆರ್ ಧಾರವಾಡ-ಬೆಂಗಳೂರು ನಗರ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಮಧ್ಯಾಹ್ನ 1:15 ಕ್ಕೆ ಹೊರಟು ಹುಬ್ಬಳ್ಳಿ, ದಾವಣಗೆರೆ ಮೂಲಕ ಸಂಜೆ 7:45 ಕ್ಕೆ ಬೆಂಗಳೂರು ತಲುಪಲಿದೆ. ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ವಾಣಿಜ್ಯ ನಿಲುಗಡೆಗಗಳಿವೆ.

ಇಂದಿನ ಪ್ರಮುಖ ಸುದ್ದಿ :-   ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ಗೆ ಜಾಮೀನು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement