ಬೀದರ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೀದರ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ನಿಂಬೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಜೂನ್ 23ರ ಮಧ್ಯಾಹ್ನ ಮಕ್ಕಳು ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದರು. ಆದರೆ, ಸಂಜೆ 5 ಗಂಟೆಯ ವೇಳೆಗೆ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ, ಶಿಕ್ಷಕರು ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಮಕ್ಕಳು ಅಸ್ವಸ್ಥರಾದ ಸುದ್ದಿ ತಿಳಿದು, ಹುಮ್ನಾಬಾದ್ ಬಿಜೆಪಿ ಶಾಸಕ ಡಾ. ಸಿದ್ದು ಪಾಟೀಲ್ ಅವರು ಆಸ್ಪತ್ರೆಗೆ ಹೋಗಿ ಮಕ್ಕಳ ಆರೋಗ್ಯ ವಿಚಾಸಿದ್ದಾರೆ. ಚಿಕಿತ್ಸೆ ನೀಡಿದ ಬಳಿಕ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಮನೆಗೆ ಕಳುಹಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ