ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕ್ಷೀಣವಾಗಿದ್ದ ಮುಂಗಾರು ಮಳೆ ಚುರುಕಾಗುತ್ತಿದ್ದು, ಕರಾವಳಿ ಭಾಗದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಪ್ರಕಾರ, ಜೂನ್ 27ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಗಂಟೆಗೆ ಸರಾಸರಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ತುಮಕೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೋಲಾರ, ಮಂಡ್ಯ ಮೈಸೂರು ಹಾಗೂ ವಿಜಯನಗರ ಜಿಲ್ಲೆ ಸೇರಿದಂತೆ ದಕ್ಷಿಣ ಒಳನಾಡಿನ ಉಳಿದ ಭಾಗಗಳಲ್ಲಿಯೂ ಮಳೆಯಾಗಲಿದೆ ಎಂದು ಹೇಳಿದೆ.ಬಾಗಲಕೋಟೆ, ಧಾರವಾಡ, ಗದಗ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಕೆಲವು ದಿನಗಳ ಕಾಲ ಒಣಹವೆ ಇರಲಿದ್ದು, ಸಾಧಾರಣ ಮಳೆ ಸುರಿಯಲಿದೆ ಎಂದು ತಿಳಿಸಿದೆ.
ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಮೂರು ಕಡೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಹೊನ್ನಾವರ ತಾಲೂಕಿನ ಹಳೆಮೇಟ್‌ನಲ್ಲಿ 110 ಮಿ.ಮೀ, ಕುಮಟಾ ತಾಲೂಕಿನ ಕಲ್ಲಬ್ಬೆಯಲ್ಲಿ 96 ಮಿ.ಮೀ ಮತ್ತು ಭಟ್ಕಳ ತಾಲೂಕಿನ ಬೆಂಗ್ರೆಯಲ್ಲಿ 86 ಮಿಮೀ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಜೋರು ಮಳೆಯಾಗಿದೆ. ಕಾರವಾರ, ಬಾಗಲಕೋಟೆ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಯ ನಾನಾ ಕಡೆಗಳಲ್ಲಿ ಶುಕ್ರವಾರ ಮಳೆಯಾಗಿದೆ.‌

ಪ್ರಮುಖ ಸುದ್ದಿ :-   ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ

4.2 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement