ವಾಸ್ತು ಸರಿಯಿಲ್ಲ ಎಂದು ಬಂದ್ ಮಾಡಲಾಗಿದ್ದ ವಿಧಾನಸೌಧದ ಸಿಎಂ ಕಚೇರಿ ದಕ್ಷಿಣದ ಬಾಗಿಲು ತೆರೆಸಿದ ಸಿದ್ದರಾಮಯ್ಯ

ಬೆಂಗಳೂರು : ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿ ತೆರೆಸಿದ್ದಾರೆ.
ಮನಸ್ಸು ಸರಿ ಇದ್ದರೆ ಎಲ್ಲವೂ ಸರಿ ಇದ್ದಂತೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಸ್ತು ಸರಿ ಇಲ್ಲ ಎಂದು ಮುಚ್ಚಿದ್ದ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿದರು. ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು ವಾಸ್ತು ಕಾರಣಕ್ಕೆ ಬಂದ್‌ ಆಗಿದ್ದ ದ್ವಾರವನ್ನು ತೆರೆಸಿ ಅದೇ ದ್ವಾರದಿಂದ ಒಳ ಪ್ರವೇಶಿಸಿದರು.
ಅನ್ನ ಭಾಗ್ಯದ ಕುರಿತ ಸಭೆ ಹಿನ್ನೆಲೆಯಲ್ಲಿ ಕಚೇರಿಗೆ ಆಗಮಿಸಿದಾಗ ದಕ್ಷಿಣದ ದ್ವಾರ ಮುಚ್ಚಿರುವುದನ್ನು ಗಮನಿಸಿದ ಅವರು, ಅದು ಯಾಕೆ ಮುಚ್ಚಿದೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಅದನ್ನು ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಮಾತು ಕೇಳಿದ ನಂತರ ಸಿದ್ದರಾಮಯ್ಯ ಅವರು ಆ ಬಾಗಿಲು ತೆರೆಯುವಂತೆ ಸೂಚಿಸಿದರು. ನಂತರ ಸಿಬ್ಬಂದಿ ದಕ್ಷಿಣದ ದ್ವಾರವನ್ನು ತೆರೆದಿದ್ದಾರೆ. ಅದೇ ದ್ವಾರದ ಮೂಲಕವೇ ಸಿದ್ದರಾಮಯ್ಯ ತಮ್ಮ ಕಚೇರಿ ಪ್ರವೇಶಿಸಿದರು. ಆರೋಗ್ಯಕರ ಮನಸ್ಸು, ಸ್ವಚ್ಛ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಅಧಿಕಾರಿಗಳಿಗೆ ಹೇಳಿದರು.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement