ನೀವು ಅಮೆರಿಕ ಅಧ್ಯಕ್ಷರಾಗಿದ್ದಾಗ 6 ಮುಸ್ಲಿಂ ರಾಷ್ಟ್ರಗಳ ಮೇಲೆ ಬಾಂಬ್ ದಾಳಿ: ಬರಾಕ್ ಒಬಾಮಾ ವಿರುದ್ಧ ನಿರ್ಮಲಾ ಸೀತಾರಾಮನ್ ವಾಗ್ದಾಳಿ

ನವದೆಹಲಿ: ಭಾರತದಲ್ಲಿ ಮುಸ್ಲಿಮರನ್ನು ನಿಭಾಯಿಸುವ ಕುರಿತ ಟೀಕೆಗಳ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಚುನಾವಣಾ ಸೋಲಿನ ನಂತರ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು “ಸಮಸ್ಯೆಗಳಿಲ್ಲದ, ಡೇಟಾ ಇಲ್ಲದೆ” ಪ್ರಶ್ನೆ ಮಾಡುತ್ತಾರೆ ಎಂದು ಅವರು ಆರೋಪಿಸಿದರು.
ನಿರ್ಮಲಾ ಸೀತಾರಾಮನ್ ಅವರು ಭಾರತದಲ್ಲಿ ಮುಸ್ಲಿಮರನ್ನು ನಡೆಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚಿನ ಹೇಳಿಕೆಗಳಿಗಾಗಿ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಷಯದ ಕುರಿತು ಒಬಾಮಾ ಅವರ ಹೇಳಿಕೆಯನ್ನು ಅವರು ಪ್ರಶ್ನಿಸಿದರು, ಒಬಾಮಾ ಅಮೆರಿಕದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅಮೆರಿಕವು ಆರು ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳ ಮೇಲೆ ಬಾಂಬ್ ದಾಳಿ ನಡೆಸಿದೆ ಎಂದು ಹೇಳಿದರು.
“ಒಬಾಮಾ ಅಧ್ಯಕ್ಷರಾಗಿದ್ದ ಅವಧಿಯಲ್ಲಿ, ಸಿರಿಯಾದಿಂದ ಯೆಮೆನ್‌ ಹಾಗೂ ಇರಾಕ್‌ವರೆಗೆ ಕನಿಷ್ಠ ಆರು ಮುಸ್ಲಿಂ ಬಹುಸಂಖ್ಯಾತ ದೇಶಗಳ ಮೇಲೆ ಬಾಂಬ್ ದಾಳಿ ನಡೆಸಲಾಯಿತು. ಜನರು ಅವರ ಆರೋಪವನ್ನು ಹೇಗೆ ನಂಬುತ್ತಾರೆ?” ಎಂದು ಪ್ರಶ್ನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಮರ್ಥಿಸಿಕೊಂಡ ನಿರ್ಮಲಾ ಸೀತಾರಾಮನ್, ‘ಈ ದೇಶದಲ್ಲಿ ಅಭದ್ರತೆ ಇದೆ ಎಂದು ಜನರು ಭಯಪಡುವ ವಾತಾವರಣವನ್ನು ಅವರು (ವಿಪಕ್ಷಗಳು) ನಿರ್ಮಿಸಿದ್ದಾರೆ.
ಗುರುವಾರ ಅಮೆರಿಕಕ್ಕೆ ಭೇಟಿಯ ಸಂದರ್ಭದಲ್ಲಿ ಭಾರತದ ಮುಸ್ಲಿಂ ಅಲ್ಪಸಂಖ್ಯಾತರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುವಂತೆ ಒಬಾಮಾ ಅವರು ಅಧ್ಯಕ್ಷ ಬೈಡನ್‌ ಅವರನ್ನು ಸಂದರ್ಶನದಲ್ಲಿ ಒತ್ತಾಯಿಸಿದ ನಂತರ ನಿರ್ಮಲಾ ಸೀತಾರಾಮನ್‌ ಅವರು ಈ ಹೇಳಿಕೆ ನೀಡಿದ್ದಾರೆ.
ಅಮೆರಿಕದಲ್ಲಿ ಪತ್ರಿಕಾಗೋಷ್ಠಿಯಲ್ಲಿ, ಗೌರವಾನ್ವಿತ ಪ್ರಧಾನ ಮಂತ್ರಿಗಳು ತಮ್ಮ ಸರ್ಕಾರವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ತತ್ವದ ಮೇಲೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ಸಮುದಾಯದ ವಿರುದ್ಧ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದ್ದಾರೆ. ದೇಶದ ಪ್ರಧಾನಿಯಾಗಿ ಅವರು ಪಡೆದ 13 ಪ್ರಶಸ್ತಿಗಳಲ್ಲಿ ಆರು ಪ್ರಶಸ್ತಿಗಳು ಮುಸ್ಲಿಮರು ಬಹುಸಂಖ್ಯಾತ ದೇಶಗಳಿಂದ ಬಂದಿವೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ 'ಡೆಂಗೆ' ಹೆಚ್ಚಳ ; ಎಲ್ಲ ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement