ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿ: 12 ಸಾವು, ಹಲವರಿಗೆ ಗಾಯ

ಬೆರ್ಹಾಂಪುರ: ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಮದುವೆ ಸಮಾರಂಭವೊಂದರ ಬಸ್ ಮತ್ತೊಂದು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬೆರ್ಹಾಂಪುರದಿಂದ ಸುಮಾರು 35 ಕಿ.ಮೀ ದೂರದಲ್ಲಿರುವ ಬರ್ಹಾಂಪುರ-ತಪ್ತಪಾಣಿ ರಸ್ತೆಯ ದಿಗಪಹಂಡಿ ಪ್ರದೇಶದ ಬಳಿ ಭಾನುವಾರ ತಡರಾತ್ರಿ ಈ ಅಪಘಾತ ಸಂಭವಿಸಿದ್ದು, ಮದುವೆ ದಿಬ್ಬಣದ ಸದಸ್ಯರಿದ್ದ ಬಸ್ ಮತ್ತೊಂದು ಪ್ರಯಾಣಿಕ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಬರ್ಹಾಂಪುರ ಪೊಲೀಸ್ ವರಿಷ್ಠಾಧಿಕಾರಿ ಶರವಣ ವಿವೇಕ ಎಂ. ತಿಳಿಸಿದ್ದಾರೆ.
ಬೆರ್ಹಾಂಪುರದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿ, ದಿಗಪಹಂಡಿ ಬಳಿಯ ಖಂಡದೇಲಿಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ, ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗಳಿಗೆ ರವಾನಿಸಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.
ಸತ್ತ 12 ಮಂದಿಯಲ್ಲಿ ಒಂದು ಕುಟುಂಬದ ಏಳು ಸದಸ್ಯರು ಮತ್ತು ಅವರ ಸಂಬಂಧಿಕರು ಸೇರಿದ್ದಾರೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಗಾಯಾಳುಗಳು ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮತ್ತು ದಿಗಪಹಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.ಅವರಲ್ಲಿ ಇಬ್ಬರನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ” ಎಂದು ಅಧಿಕಾರಿ ಹೇಳಿದರು.
ಏತನ್ಮಧ್ಯೆ, ವಿಶೇಷ ಪರಿಹಾರ ಆಯೋಗವು ಗಾಯಗೊಂಡ ಪ್ರತಿಯೊಬ್ಬರಿಗೂ ಅವರ ಚಿಕಿತ್ಸೆಗಾಗಿ ₹ 30,000 ಮಂಜೂರು ಮಾಡಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯಕುಮಾರಗೆ ಕಪಾಳಮೋಕ್ಷ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement