ಪ್ರತಿಪಕ್ಷಗಳ ಒಗ್ಗಟ್ಟು ಮುರಿಯುವುದೇ ಎಎಪಿಯ ಏಕೈಕ ಉದ್ದೇಶ: ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಾಯಕ ಅಜಯ ಮಾಕನ್‌ ವಾಗ್ದಾಳಿ

ನವದೆಹಲಿ : ಆಮ್‌ ಆದ್ಮಿ ಪಕ್ಷ ಮತ್ತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಪ್ರತಿಪಕ್ಷಗಳ ಏಕತೆಯನ್ನು ಒಡೆಯಲು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಅಜಯ್‌ ಮಾಕನ್‌ ಭಾನುವಾರ ಆರೋಪಿಸಿದ್ದಾರೆ.
ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಒಂದು ಕಡೆ, ಎಎಪಿ ಪಕ್ಷದವರು ಕಾಂಗ್ರೆಸ್ ಬೆಂಬಲವನ್ನು ಬಯಸುತ್ತಿದ್ದಾರೆ; ಮತ್ತೊಂದೆಡೆ, ಕಾಂಗ್ರೆಸ್‌ ವಿರುದ್ಧ ಮಾತನಾಡುತ್ತಿದ್ದಾರೆ. ಈ ಮೂಲಕ ಅವರು ಏನು ಬಯಸುತ್ತಾರೆ, ಅವರು ನಮ್ಮ ಕಾಂಗ್ರೆಸ್‌ ಪಕ್ಷದ ಬೆಂಬಲವನ್ನು ತೆಗೆದುಕೊಳ್ಳಲು ಬಯಸುತ್ತಾರೆಯೇ ಅಥವಾ ದೂರವಿರಲು ಬಯಸುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಅರವಿಂದ ಕೇಜ್ರಿವಾಲ್ ಜೈಲಿಗೆ ಹೋಗಲು ಬಯಸುವುದಿಲ್ಲ, ಆದ್ದರಿಂದ ಅವರು ಬಿಜೆಪಿಯೊಂದಿಗಿದ್ದಾರೆ ಮತ್ತು ಅವರ (ಎಎಪಿ) ಏಕೈಕ ಉದ್ದೇಶವೆಂದರೆ ಪ್ರತಿಪಕ್ಷಗಳ ಒಗ್ಗಟ್ಟನ್ನು ಮುರಿಯುವುದು” ಎಂದು ಅವರು ಆರೋಪಿಸಿದ್ದಾರೆ.
ಇದಕ್ಕೂ ಮುನ್ನ ಜೂನ್ 23 ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಹಲವಾರು ವಿರೋಧ ಪಕ್ಷಗಳು ಮತ್ತು ಅವರ ನಾಯಕರು ಸಭೆ ನಡೆಸಿದರು. 2014 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ನಿತೀಶಕುಮಾರ ಕಳೆದ ಕೆಲವು ತಿಂಗಳುಗಳಿಂದ ವಿರೋಧ ಪಕ್ಷಗಳ ಮೈತ್ರಿಗೆ ಪ್ರಯತ್ನಿಸುತ್ತಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಜೂನ್ 23ರ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ, ಸಭೆಯ ಸಮಾರೋಪದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಎಎಪಿ ನಾಯಕರು ಹಾಜರಿರಲಿಲ್ಲ.
ಪಾಟ್ನಾ ಸಭೆಯ ನಂತರ, ಎಎಪಿ ಹೇಳಿಕೆಯಲ್ಲಿ, “ಕಾಂಗ್ರೆಸ್ ಕೇಂದ್ರ ಸರ್ಕಾರವು ದೆಹಲಿ ಅಧಿಕಾರಿಗಳ ಮೇಲೆ ನಿಯಂತ್ರಣ ಸಾಧಿಸಲು ತಂದ ಬ್ಲ್ಯಾಕ್‌ ಸುಗ್ರೀವಾಜ್ಞೆಯನ್ನು ಸಾರ್ವಜನಿಕವಾಗಿ ಖಂಡಿಸುವವರೆಗೆ ಮತ್ತು ರಾಜ್ಯಸಭೆಯಲ್ಲಿ ಅದರ ಎಲ್ಲಾ 31 ಸಂಸದರು ಸುಗ್ರೀವಾಜ್ಞೆಯನ್ನು ವಿರೋಧಿಸುತ್ತಾರೆ ಎಂದು ಘೋಷಿಸುವವರೆಗೆ, ಕಾಂಗ್ರೆಸ್‌ ಪಾಲ್ಗೊಳ್ಳುವ ಭವಿಷ್ಯದ ಸಮಾನ ಮನಸ್ಕ ಪ್ರತಿಪಕ್ಷಗಳ ಸಭೆಗಳಲ್ಲಿ ಭಾಗವಹಿಸಲು ಎಎಪಿಗೆ ಕಷ್ಟವಾಗುತ್ತದೆ ಎಂದು ಹೇಳಿತ್ತು.

ಇಂದಿನ ಪ್ರಮುಖ ಸುದ್ದಿ :-   ಓಂಕಾರೇಶ್ವರದಲ್ಲಿ108 ಅಡಿ ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement