ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್)ಯ 12 ಕ್ಕೂ ಹೆಚ್ಚು ಮಾಜಿ ಶಾಸಕರು, ಸಚಿವರು ಮತ್ತು ಪದಾಧಿಕಾರಿಗಳು ಸೋಮವಾರ ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಗೊಂಡರು. ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಈ ಬೆಳವಣಿಗೆ ನಡೆದಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಪಕ್ಷಕ್ಕೆ ಸೇರ್ಪಡೆಯಾಗುವ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ, ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕರಾದ ಪಣ್ಯಂ ವೆಂಕಟೇಶ್ವರಲು, ಕೋರಂ ಕನಕಯ್ಯ, ಕೋಟ ರಾಮಬಾಬು ಸೇರಿದಂತೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಪ್ರಮುಖರು. ಾಲ್ಲದೆ, ಬಿಆರ್ಎಸ್ ಪರಿಷತ್ ಸದಸ್ಯ ನರಸಾ ರೆಡ್ಡಿ ಪುತ್ರ ರಾಕೇಶ್ ರೆಡ್ಡಿ ಕೂಡ ಕಾಂಗ್ರೆಸ್ ಸೇರಿದ್ದಾರೆ.
ಪಾಟ್ನಾದಲ್ಲಿ ನಡೆದ ವಿರೋಧ ಪಕ್ಷಗಳ ಚುನಾವಣಾ ಪೂರ್ವ ಒಗ್ಗಟ್ಟಿನ ಕುರಿತು ಚರ್ಚಿಸಲು ಸಭೆಗೆ ಬಿಆರ್ಎಸ್ ಪಕ್ಷ ಗೈರಾದ ಕೆಲವೇ ದಿನಗಳಲ್ಲಿ ಈ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಕರೆದಿದ್ದ ಸಭೆಯಲ್ಲಿ ದೇಶದ ಬಹುತೇಕ ಎಲ್ಲ ಪ್ರಮುಖ ವಿರೋಧ ಪಕ್ಷಗಳ ನಾಯಕರು ಉಪಸ್ಥಿತರಿದ್ದರು.
2024 ರ ಲೋಕಸಭಾ ಚುನಾವಣೆಯಲ್ಲಿ ಬಿಆರ್ಎಸ್ ಸ್ವಂತವಾಗಿ ಸ್ಪರ್ಧಿಸಲು ಸಿದ್ಧವಾಗಿದೆ ಮತ್ತು ಗಣನೀಯ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಪ್ರಭಾವಶಾಲಿ ಆರಂಭವನ್ನು ಮಾಡಲು ಪ್ರಯತ್ನಿಸುತ್ತದೆ ಎಂದು ಕೆಟಿಆರ್ ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ