ಧಾರವಾಡ- ಬೆಂಗಳೂರು ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಧಾರವಾಡ: ಧಾರವಾಡ ಹಾಗೂ ಬೆಂಗಳೂರಿನ ನಡುವೆ ಸಂಚರಿಸಲಿರುವ ವಂದೇ ಭಾರತ ರೈಲು ಸೇರಿದಂತೆ ಒಟ್ಟು 5 ವಂದೇ ಭಾರತ ಎಕ್ಸಪ್ರೆಸ್ ರೈಲುಗಳಿಗೆ ಪ್ರಧಾನಿ ಮೋದಿ ಭೋಪಾಲದಿಂದ ಇಂದು ಮಂಗಳವಾರ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ. ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪಥಿ ರೈಲು ನಿಲ್ದಾಣದಿಂದ ವರ್ಚುವಲ್​​ ಮೂಲಕ ಹಸಿರು ನಿಶಾನೆ ತೋರಿಸಿದರು. ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ, ಮಧ್ಯಪ್ರದೇಶ ರಾಜ್ಯಪಾಲ ಮಂಗುಭಾಯ್ ಪಟೇಲ, ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಧಾರವಾಡದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಜರಿದ್ದರು. ಅಲ್ಲದೆ, ಉದ್ಘಾಟನೆಗೊಂಡ ವಂದೇ ಭಾರತ್ ರೈಲಿನಲ್ಲಿ ಪ್ರಯಾಣ ಮಾಡಿದರು. ಚಾಲನೆ ಸಿಕ್ಕ ನಂತರ ಬೆಂಗಳೂರಿಗೆ ರೈಲು ಹೊರಟಿದೆ. ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್​​ ರೈಲು ಸದ್ಯಕ್ಕೆ 530 ಆಸನಗಳನ್ನು ಒಳಗೊಂಡ 8 ಬೋಗಿಗಳನ್ನು ಹೊಂದಿದೆ. ಸೆಮಿ-ಹೈ-ಸ್ಪೀಡ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡಕ್ಕೆ 6 ಗಂಟೆ 13 ನಿಮಿಷಗಳಲ್ಲಿ 490 ಕಿಲೋಮೀಟರ್ ದೂರ ಕ್ರಮಿಸುತ್ತದೆ ಇದು ಬೆಂಗಳೂರು-ಧಾರವಾಡ ಪ್ರಯಾಣವನ್ನು ಕನಿಷ್ಠ 1 ಗಂಟೆ ಕಡಿತಗೊಳಿಸುತ್ತದೆ. ಧಾರವಾಡ-ಬೆಂಗಳೂರು ವಂದೇ ಭಾರತ ಎಕ್ಸ್‌ಪ್ರೆಸ್ ಕರ್ನಾಟಕದ ಎರಡನೇ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಾಗಿದೆ. ಮೈಸೂರು-ಚೆನ್ನೈ ಮಾರ್ಗದಲ್ಲಿ ತನ್ನ ಮೊದಲ ವಂದೇ ಭಾರತ ಎಕ್ಸ್‌ಪ್ರೆಸ್ ಅನ್ನು ಪಡೆದುಕೊಂಡಿತು, ಇದು ದಕ್ಷಿಣ ಪ್ರದೇಶಕ್ಕೆ ಮೊದಲ ಅರೆ-ಹೈ-ಸ್ಪೀಡ್ ರೈಲು ಕೂಡ ಆಗಿದೆ.
ಧಾರವಾಡ-ಬೆಂಗಳೂರು ವಂದೇ ಭಾರತ ರೈಲಿನ ಜೊತೆಗೆ ಭೋಪಾಲ (ರಾಣಿ ಕಮಲಾಪತಿ)-ಇಂದೋರ ವಂದೇ ಭಾರತ ಎಕ್ಸ್‌ಪ್ರೆಸ್, ಭೋಪಾಲ (ರಾಣಿ ಕಮಲಾಪತಿ)-ಜಬಲ್ಪುರ, ರಾಂಚಿ-ಪಾಟ್ನಾ ವಂದೇ ಭಾರತ ಎಕ್ಸ್‌ಪ್ರೆಸ್ ಮತ್ತು ಮಡಗಾಂವ್‌-ಮುಂಬೈ ವಂದೇ ಭಾರತ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement