ಸರ್ಕಾರಿ ವೈದ್ಯರಿಗೆ ಖಾಸಗಿ ಕ್ಲಿನಿಕ್ ನಡೆಸಲು ಅವಕಾಶದ ಬಗ್ಗೆ ಪುನರ್ ಪರಿಶೀಲನೆ: ಆರೋಗ್ಯ ಸಚಿವ ದಿನೇಶ ಗುಂಡೂರಾವ್

ಮೈಸೂರು : ಸರ್ಕಾರಿ ವೈದ್ಯರು ಕ್ಲಿನಿಕ್ ನಡೆಸಲು ನೀಡಿರುವ ಅವಕಾಶವನ್ನು ಪುನರ್ ಪರಿಶೀಲನೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಹಿಂದೆ ವೈದ್ಯರ ಕೊರತೆ ಇದ್ದ ಕಾರಣ ಸಾರ್ವಜನಿಕರಿಗೆ ಸೇವೆ ಸಿಗಲಿ ಎನ್ನುವ ಕಾರಣಕ್ಕೆ ವೈದ್ಯರು ಕ್ಲಿನಿಕ್ ನಡೆಸಲು ಸರ್ಕಾರವೇ ಅವಕಾಶ ನೀಡಿತ್ತು. ಸರ್ಕಾರಿ ವೈದ್ಯಾಧಿಕಾರಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಸೇವೆ ಮಾಡಬೇಕು. ಗುತ್ತಿಗೆ ಆಧಾರದ ಮೇಲೆ ಸೇವೆ ಸಮಾಡುತ್ತಿರುವ ವೈದ್ಯರಿಗೆ ಕ್ಲಿನಿಕ್ ನಡೆಸಲು ಈಗ ಅವಕಾಶ ಇದೆ. ಈಗ ಆಗುತ್ತಿರುವ ಸಮಸ್ಯೆಗಳನ್ನು ಗಮನಿಸಿ ಪುನರ್ ಪರಿಶೀಲನೆ ಮಾಡಲು ಮುಂದಾಗಿದ್ದೇವೆ ಎಂದು ತಿಳಿಸಿದರು.
ಆರೋಗ್ಯ ಇಲಾಖೆಯಲ್ಲಿನ ಅರೆಕಾಲಿಕ ವೈದ್ಯರು ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವುದಕ್ಕೆ ನಿರ್ಬಂಧ ಹೇರಲು ಚಿಂತನೆ ನಡೆಸಲಾಗಿದೆ. ಹಿಂದೆ ವೈದ್ಯರ ಕೊರತೆ ಇದ್ದ ಕಾರಣ ಎರಡು ಕಡೆಗಳಲ್ಲಿ ಕೆಲಸ ಮಾಡಲು ಅವಕಾಶ ಕೊಡಲಾಗಿತ್ತು. ಈಗ ಅಂತಹ ಸಮಸ್ಯೆಗಳಿಲ್ಲ. ಹೀಗಾಗಿ ಈ ಬಗ್ಗೆ ಮರುಚಿಂತನೆ ನಡೆಸಲು ಮುಂದಾಗಿದ್ದೇವೆ ಎಂದರು.
ಹೊಸ ಆಸ್ಪತ್ರೆಗಳನ್ನು ನಿರ್ಮಾಣ ಮಾಡುವುದು ದೊಡ್ಡದಲ್ಲ. ಆದರೆ ಇರುವ ಆಸ್ಪತ್ರೆಗಳಿಗೆ ಸೌಕರ್ಯ ಕಲ್ಪಿಸುವುದು ಅದಕ್ಕಿಂತ ಮುಖ್ಯ ಎಂದರು.
ಚಾಮರಾಜನಗರ ಆಕ್ಸಿಜನ್ ದುರಂತ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಮರು ತನಿಖೆಗೆ ಒಪ್ಪಿಗೆ ಕೊಡಿ ಎಂದು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಯಾವ ಅಂಶಗಳ ಆಧಾರದ ಮೇಲೆ ಮರು ತನಿಖೆಯಾಗಬೇಕು ಎಂಬ ಬಗ್ಗೆ ಚಾರ್ಚ್ ಫ್ರೇಮ್ ಮಾಡಿಕೊಡಿ ಎಂದು ಸರ್ಕಾರದಿಂದ ಪತ್ರ ಬಂದಿದೆ. ಈಗ ಅದನ್ನು ಸಿದ್ಧ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement