ನಡು ರಸ್ತೆಯಲ್ಲೇ ಯುವತಿಗೆ ಕತ್ತಿಯಿಂದ ಹಲ್ಲೆ ಮಾಡಿದ ವ್ಯಕ್ತಿ : ಸ್ಥಳೀಯರಿಂದ ರಕ್ಷಣೆ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳವಾರ ಪುಣೆಯ ಸದಾಶಿವ ಪೇಟದಲ್ಲಿ 19 ವರ್ಷದ ಯುವತಿಯ ಮೇಲೆ ಕತ್ತಯಿಂದ ಹಲ್ಲೆ ನಡೆಸಲಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಸಂತ್ರಸ್ತೆಯ ತಲೆ ಮತ್ತು ಕೈಗೆ ಗಾಯಗಳಾಗಿದ್ದು, ವೈದ್ಯಕೀಯ ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಒಂದು ನಿಮಿಷದ ಸಿಸಿಟಿವಿ ಫೂಟೇಜ್‌ನಲ್ಲಿ, ದಾಳಿಕೋರ ಜನನಿಬಿಡ ರಸ್ತೆಯಲ್ಲಿ ಆಯುಧದೊಂದಿಗೆ ಮಹಿಳೆಯನ್ನು ಹಿಂಬಾಲಿಸುತ್ತಿರುವುದನ್ನು ಕಾಣಬಹುದು. ದಾಳಿಕೋರ ಯುವತಿಗೆ ಕತ್ತಯಿಂದ ತಲೆಯ  ಹಿಂಭಾಗದಲ್ಲಿ ಹೊಡೆದಾಗ, ಅವಳು ನೆಲದ ಮೇಲೆ ಬೀಳುತ್ತಾಳೆ. ಕೆಲವೇ ಸೆಕೆಂಡ್‌ಗಳಲ್ಲಿ ಜಾಗೃತರಾದ ಸ್ಥಳೀಯರು ಮಹಿಳೆಯ ಕಡೆಗೆ ಓಡಿ ಆಕೆಗೆ ಸಹಾಯ ಮಾಡುತ್ತಿರುವುದನ್ನು ವೀಡಿಯೊದಲ್ಲಿ ನೋಡಬಹುದು. ಕೆಲವು ಪುರುಷರು ದಾಳಿಕೋರನ ಮೇಲೆ ವಸ್ತುಗಳನ್ನು ಎಸೆಯುವ ಮೂಲಕ ಆತನನ್ನು ತಡೆಯಲು ಯತ್ನಿಸಿದ್ದಾರೆ.

ಪೊಲೀಸರ ಪ್ರಕಾರ, ಕೆಲವು ಸಮಸ್ಯೆಗಳ ನಂತರ ಮಹಿಳೆ ತನ್ನ ಮಾಜಿ ಸಹಪಾಠಿಯಾಗಿರುವ ದಾಳಿಕೋರನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ್ದಳು. ಹುಡುಗಿ ತನ್ನ ಸ್ನೇಹಿತನೊಂದಿಗೆ ಪ್ರಯಾಣಿಸುತ್ತಿದ್ದಾಗ ದಾಳಿಕೋರನೊಂದಿಗೆ ಮಾತನಾಡಲು ನಿರಾಕರಿಸಿದಾಗ ದಾಳಿ ನಡೆದಿದೆ ಎಂದು ಡಿಸಿಪಿ ಸಂದೀಪ್ ಗಿಲ್ ತಿಳಿಸಿದ್ದಾರೆ.

ಸಿಸಿಟಿವಿ ಕ್ಲಿಪ್ ಆಧಾರದ ಮೇಲೆ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ದಾಳಿಕೋರನು ಮಹಿಳೆಗೆ ಕೆಲ ಸಮಯದಿಂದ ಕಿರುಕುಳ ನೀಡುತ್ತಿದ್ದ. ಆರೋಪಿಯ ತಂದೆಗೆ ಈ ಬಗ್ಗೆ ತಿಳಿಸಲಾಗಿತ್ತು. ಆದರೂ ಆತ ತಮ್ಮ ಮಗಳನ್ನು ಕೊಲ್ಲಲು ಯತ್ನಿಸಿದ್ದಾನೆ ಎಂದು ಯುವತಿಯ ತಾಯಿ ಹೇಳಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಭಾರತ-ಕೆನಡಾ ಬಾಂಧವ್ಯ ಹಾಳು ಮಾಡಲು ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಚು ರೂಪಿಸಿತ್ತು ಪಾಕಿಸ್ತಾನದ ಐಎಸ್‌ಐ : ವರದಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement