ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಭಾಗದಲ್ಲಿ ಜೂನ್ 29ರಿಂದ ಜುಲೈ 3 ರವರೆಗೆ ಭಾರೀ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುನ್ಸೂಚನೆಯ ಪ್ರಕಾರ, ಜೂನ್ 29, ಗುರುವಾರ ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಬಹುತೇಕ ಕಡೆ ಉತ್ತಮ ಮಳೆಯಾಗಲಿದೆ. ಕರಾವಳಿಯಲ್ಲಿ ಒಂದೆರಡು ಕಡೆ 11 ರಿಂದ 20 ಸೆಂ.ಮೀ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗುರುವಾರದಿಂದ ಸೋಮವಾರದ ವರೆಗೆ, ಈ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಜೂನ್ 28 ರಿಂದ ಜುಲೈ 2 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 40-45 ಕಿಮೀ ವೇಗದಲ್ಲಿ ಮತ್ತು ಗರಿಷ್ಠ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲೂ ಮಳೆಯಾಗುವ ಸಾಧ್ಯತೆಯಿದೆ..
ಗುರುವಾರ ಮತ್ತು ಶನಿವಾರದ ನಡುವೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು  ಮುನ್ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಮಂಗನ ಕಾಯಿಲೆಗೆ ಐದು ವರ್ಷದ ಬಾಲಕಿ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement