ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಎನ್‌ಐಎ ಗಡುವು : ಜೂನ್‌ 30ರೊಳಗೆ ಶರಣಾಗದಿದ್ದರೆ ಮನೆ ಜಪ್ತಿ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿರುವ ಎನ್‌ಐಎ ಆರೋಪಿಗಳಿಗೆ ಜೂನ್ 30ರ ಒಳಗೆ ಎನ್‌ಐಎ ನ್ಯಾಯಾಲಯಕ್ಕೆ ಶರಣಾಗಬೇಕು ಎಂದು ಗಡುವು ನೀಡಿದೆ. ಇಲ್ಲದಿದ್ದಲ್ಲಿ ಆರೋಪಿಗಳ ಮನೆಯನ್ನು ಜಪ್ತಿ ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದೆ.
ಬುಧವಾರ ಎನ್ ಐಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮೈಕ್ ಘೋಷಣೆಯ ಮೂಲಕ ಆರೋಪಿಗಳಿಗೆ ಜೂನ್ 30ರ ಒಳಗೆ ಶರಣಾಗಲು ಗಡುವು ನೀಡಿದೆ. ಇಲ್ಲದೇ ಹೋದರೆ ಅವರ ಮನೆ ಹಾಗೂ ಆಸ್ತಿಪಾಸ್ತಿಗಳನ್ನು ಮುಟ್ಟಗೋಲು ಹಾಕಲಾಗುವುದು ಎಂದು ಹೇಳಿದೆ. ಅಲ್ಲದೇ ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ ಕೊಡುವುದಾಗಿ ಘೋಷಿಸಿದೆ.
ತಲೆಮರೆಸಿಕೊಂಡಿರುವ ಆರೋಪಿಗಳಾದ ಉಮ್ಮರ್ ಫಾರೂಕ್ ಮತ್ತು ಮುಸ್ತಫಾ ಮನೆಗೆ ಭೇಟಿ ನೀಡಿದ ಎನ್‌ಐಎ ಅಧಿಕಾರಿಗಳು ಅವರ ಮನೆಗೆ ಎನ್‌ಐಎ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪ ಕೋಳಿ ಮಾಂಸದ ಅಂಗಡಿ ನಡೆಸುತ್ತಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ ನೆಟ್ಟಾರು ಅವರನ್ನು 2022ರ ಜುಲೈ 26ರ ರಾತ್ರಿವೇಳೆ ದುರ್ಷರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ 14 ಆರೋಪಿಗಳನ್ನು ಬಂಧಿಸಿದ್ದ ಎನ್ ಐಎ ಉಳಿದ 6 ಮಂದಿಯ ಸುಳಿವು ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿತ್ತು.

ಪ್ರಮುಖ ಸುದ್ದಿ :-   ಜೋಗಿ, ಕಬ್ಬಿನಾಲೆ, ಶಿವಾನಂದ ಹೆಗಡೆಗೆ ಕೆರೆಮನೆ ʼಮಹಾಬಲ ಪ್ರಶಸ್ತಿʼ ಪ್ರಕಟ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement