ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ನಿನ್ನೆ ಹಲವೆಡೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು ಇಂದು, ಗುರುವಾರ ಕೆ.ಆರ್. ಪುರ ತಹಶೀಲ್ದಾರ್ ಅಜಿತ್ ರೈ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು ಸೇರಿ ಅಜಿತ್ ರೈ ಅವರಿಗೆ ಸೇರಿದ ಆಸ್ತಿಗಳ ಮೇಲೆ ಲೋಕಾಯುಕ್ತ ಪೊಲೀಸರು ನಿನ್ನೆ ದಾಳಿ ನಡೆಸಿದ್ದರು. ಸತತ 30 ಗಂಟೆಗಳ ಶೋಧ ನಡೆಸಿ ಲಭ್ಯವಾದ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿರುವುದು ಕಂಡು ಬಂದ ಹಿನ್ನೆಲೆ ಅಜಿತ್ ರೈ ಅವರನ್ನು ಬಂಧಿಸಲಾಗಿದ್ದು, 24 ಗಂಟೆಗಳ ಒಳಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ದಾಳಿ ವೇಳೆ ಲೋಕಾಯುಕ್ತ ಪೊಲೀಸರು 1.90 ಕೋಟಿ ಮೌಲ್ಯದ ವಸ್ತುಗಳನ್ನು, ಐಷಾರಾಮಿ ಕಾರು ಮತ್ತು ಬೈಕ್ಗಳನ್ನು ವಶಕ್ಕೆ ಪಡೆದಿದ್ದರು. ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಲಭ್ಯವಾಗಿದ್ದು, ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು ಪತ್ತೆಯಾಗಿವೆ ಎನ್ನಲಾಗಿದ್ದು ಬೇನಾಮಿ ಹೆಸರಿನಲ್ಲಿ ಅಜಿತ್ ರೈ ಆಸ್ತಿ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಅವರ ಆದಾಯಕ್ಕೆ ಹಾಗೂ ದೊರೆತಿರುವ ಆಸ್ತಿಗಳು ಹಾಗೂ ಐಶಾರಾಮಿ ವಸ್ತುಗಳಿಗೆ ಹೋಲಿಸಿದಾಗ ಸಾಕಷ್ಟು ವ್ಯತ್ಯಾಸ ಕಂಡುಬಂದಿದೆ. ಹೀಗಾಗಿ ಲೋಕಾಯುಕ್ತ ಪೊಲೀಸರು ದಾಖಲೆಗಳನ್ನು ಬಹಳ ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದ ನಂತರ ಇಂದು, ಗುರುವಾರ ಅಜಿತ್ ರೈ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಬೆಂಗಳೂರು ಪೂರ್ವ ತಾಲೂಕಿನ (ಕೆ.ಆರ್.ಪುರ) ತಹಶೀಲ್ದಾರ ಆಗಿದ್ದ ವೇಳೆ ಅಜಿತ್ ಕುಮಾರ್ ರೈಯನ್ನ ಸರ್ಕಾರ 2022, ನವೆಂಬರಿನಲ್ಲಿ ಅಮಾನತು ಮಾಡಲಾಗಿತ್ತು.
ಆದರೆ ಅಮಾನತು ಆದೇಶದ ವಿರುದ್ಧ ಕೆ.ಎಟಿಯಲ್ಲಿ ಪ್ರಶ್ನಿಸಿ ತಡೆ ತೆರವು ಮಾಡಿದ್ದ ಅಜಿತ್ ರೈ ಮತ್ತೆ ಬೆಂಗಳೂರು ಪೂರ್ವ ತಾಲೂಕಿನ (ಕೆ.ಆರ್.ಪುರ) ತಹಶೀಲ್ದಾರ ಆಗಿ ನೇಮಕಗೊಂಡಿದ್ದರು.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ