ತಡೆ ಹಿಡಿದಿದ್ದ ಹಿಂದಿನ ಅವಧಿ ಕಾಮಗಾರಿಗಳ ಅನುದಾನ ಬಿಡುಗಡೆಗೆ ಸರ್ಕಾರದ ಆದೇಶ

ಬೆಂಗಳೂರು : ಹಿಂದಿನ ಸರ್ಕಾರದ ಅವಧಿ ಕಾಮಗಾರಿಗಳ ಹಣ ಬಿಡುಗಡೆಗೆ ತಡೆ ನೀಡಿದ್ದ ಸರ್ಕಾರ ಈಗ ಅದನ್ನು ತೆರವು ಮಾಡಿದೆ. ಹಾಗೂ ಎಲ್ಲ ಇಲಾಖೆಗಳು, ನಿಗಮಗಳ ಕಾಮಗಾರಿ ಬಿಲ್ ಬಿಡುಗಡೆ ಮಾಡುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಎಲ್ಲ ಇಲಾಖೆಗಳು, ತಮ್ಮ ಅಧೀನದ ಕಾಮಗಾರಿ ಬಿಲ್​ ಪಾವತಿಸುವ ಕಾಮಗಾರಿಯ ನೈಜತೆ, ನಿಯಮಾನುಸಾರ ಇದೆಯಾ ಎಂದು ಖಾತ್ರಿ ಪಡಿಸಿಕೊಂಡು ಸಂಬಂಧಿಸಿದ ಇಲಾಖಾ ಸಚಿವರ ಅನುಮೋದನೆ ಪಡೆದು ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ. ಏಕ್​ರೂಪ್​ ಕೌರ್ ಸುತ್ತೋಲೆ ಹೊರಡಿಸಿದ್ದಾರೆ.
ಎಲ್ಲ ಇಲಾಖೆಗಳು ಮತ್ತು ಇಲಾಖೆಗಳ ಅಧೀನಕ್ಕೊಳಪಡುವ ನಿಗಮ, ಮಂಡಳಿ, ಪ್ರಾಧಿಕಾರಗಳ ಮುಂದುವರೆದ ಕಾಮಗಾರಿಗಳಿಗೆ ಸಂಬಂಧಿಸಿದಂತ ಬಿಲ್ಲುಗಳ ನೈಜತೆ ಹಾಗೂ ಕಾಮಗಾರಿ ನಿಯಮಾನುಸಾರ ಇರುವುದನ್ನು ಖಾತ್ರಿಪಡಿಸಿಕೊಂಡು ಸಂಬಂಧಪಟ್ಟ ಇಲಾಖಾ ಸಚಿವರ ಅನುಮೋದನೆ ಪಡೆದು ಹಣ ಬಿಡುಗಡೆ ಮಾಡುವುದು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಮುಂದುವರಿದ ಕಾರ್ಯಕ್ರಮ, ಯೋಜನೆಗಳಿಗೆ ಸಂಬಂಧಿಸಿದಂತೆ ಸರಕು ಮತ್ತು ಸೇವೆಗಳ ಸಂಗ್ರಹಣೆಗಳ ಸಂಬಂಧ ಹಣ ಬಿಡುಗಡೆ ಮಾಡಬಹುದಾಗಿದೆ. ಪ್ರಾರಂಭವಾಗದಿರುವ ಕಾಮಗಾರಿಗಳ ಬಗ್ಗೆ 2023 ಮೇ 22ರ ನಿರ್ದೇಶನಗಳು ಮುಂದುವರಿಯುತ್ತವೆ ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷದಿಂದ ಸ್ಪರ್ಧೆ ; ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement