ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ತೇಲಂಗಾರ ಗ್ರಾಮದ ಹೊರವಲಯದಲ್ಲಿ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಮೃತ ವ್ಯಕ್ತಿಯನ್ನು ನಾಗರಾಜ ಗಣಪತಿ ಗಾಂವ್ಕರ (35) ಎಂದು ಗುರುತಿಸಲಾಗಿದೆ. ಈತ ತೇಲಂಗಾರದ ಕಿರಗಾರಿಮನೆಯ ನಿವಾಸಿ. ಮನೆಯ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪದವಿ ಮುಗಿಸಿದ್ದರೂ ಮದುವೆಯಾಗಲು ಹೆಣ್ಣು ಕೂಡ ಸಿಗುತ್ತಿಲ್ಲ. ಇದೇ ಕಾರಣಕ್ಕೆ ಮನನೊಂದಿದ್ದ ಯುವಕ, ಖಿನ್ನತೆಗೆ ಒಳಗಾಗಿ ಇದೀಗ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ. ಮನೆಯಲ್ಲಿ ಈತ ಮತ್ತು ಈತನ ತಂದೆ -ತಾಯಿ ಮೂವರೇ ಇರುತ್ತಿದ್ದರು. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ