ಎರಡು ಆಟೋ-ಲಾರಿ ನಡುವೆ ಭೀಕರ ಅಪಘಾತ: ಏಳು ಮಂದಿ ಸಾವು

ವಿಜಯನಗರ : ಎರಡು ಆಟೋ ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ ಎಂದು ವರದಿಯಾಗಿದೆ.
ಅಪಘಾತದಲ್ಲಿ ಇಬ್ಬರು ಮಕ್ಕಳು ಸಹ ಗಾಯಗೊಂಡಿದ್ದು, ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳ್ಳಾರಿಯಿಂದ ತುಂಗಭದ್ರಾ ಡ್ಯಾಮ್​ ಕಡೆಗೆ ಆಟೋ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಬಳ್ಳಾರಿಯಿಂದ ಎರಡು ಆಟೋದಲ್ಲಿ 19 ಜನರು ತುಂಗಭದ್ರಾ ಡ್ಯಾಮ್​ಗೆ ಕಡೆಗೆ ತೆರಳುತ್ತಿದ್ದಾಗ ಎರಡು ಆಟೋ ಹಾಗೂ ಲಾರಿ ನಡುವೆ ಡಿಕ್ಕಿ ಈ ದುರ್ಘಟನೆ ಸಂಭವಿಸಿವೆ ಎಂದು ಹೇಳಲಾಗಿದೆ.
ಕೆಲವು ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ತೀವ್ರವಾಗಿ ಗಾಯಗೊಂಡವರನ್ನು ಬಳ್ಳಾರಿಯ ವಿಮ್ಸ್ ಗೆ ರವಾನಿಸಲಾಗಿದೆ. ಸ್ಥಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement