ಮುಂಬೈ : ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಮಕ್ಕಳು ಸೇರಿದಂತೆ 26 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ.
ಬಸ್ ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿತ್ತು. ರಾಜ್ಯದ ಬುಲ್ಧಾನ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಇದಕ್ಕೂ ಮುನ್ನ ಬುಲ್ಧಾನ ಪೊಲೀಸ್ ಉಪ ಪೊಲೀಸ್ ವರಿಷ್ಠಾಧೀಕಾರಿ ಬಾಬುರಾವ್ ಮಹಾಮುನಿ ಮಾತನಾಡಿ, ಬಸ್ಸಿನಿಂದ 25 ಶವಗಳನ್ನು ಹೊರತೆಗೆಯಲಾಗಿದೆ. ಬಸ್ಸಿನಲ್ಲಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದರು. 6-8 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಬಸ್ ಚಾಲಕ ಸುರಕ್ಷಿತವಾಗಿದ್ದಾರೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸಾನೆ ತಿಳಿಸಿದ್ದಾರೆ.
“ಒಟ್ಟು 33 ಜನರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಅದರಲ್ಲಿ 26 ಜನರು ಸಾವಿಗೀಡಾಗಿದ್ದಾರೆ. ಮತ್ತು 7 ಜನರಿಗೆ ಗಾಯಗಳಾಗಿವೆ.
ಪೊಲೀಸರ ಪ್ರಕಾರ, ಬಸ್‌ನಲ್ಲಿ ಮದುವೆಗೆ ಜನರನ್ನು ಒಯ್ಯುತ್ತಿತ್ತು. ಮಳೆಯಿಂದಾಗಿ ಅಪಘಾತ ಸಂಭವಿಸಿದೆ. ಬಸ್‌ನ ಚಾಲಕ ಬದುಕುಳಿದಿದ್ದು, ಟೈರ್ ಒಡೆದು, ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡು ಬಸ್ ಪಲ್ಟಿಯಾಗಿದೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸಾನೆ ಹೇಳಿದ್ದಾರೆ.
ಬುಲ್ಧಾನ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ತನಿಖೆಗೂ ಆದೇಶಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ