ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಮೇಲೆ ದಾಳಿ ಪ್ರಕರಣ: ಹರ್ಯಾಣದಲ್ಲಿ 4 ಮಂದಿ ಬಂಧನ

ನವದೆಹಲಿ: ಕಳೆದ ವಾರ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳನ್ನು ಹರಿಯಾಣದ ಶಹಜಾದಪುರದಲ್ಲಿ ಬಂಧಿಸಲಾಗಿದೆ.
ಬಂಧಿತ ನಾಲ್ವರು ಆರೋಪಿಗಳ ಪೈಕಿ ಮೂವರು ಉತ್ತರ ಪ್ರದೇಶದವರು. ಅವರನ್ನು ಪ್ರಶಾಂತ, ವಿಕಾಸ ಮತ್ತು ಲವಿಶ್ ಎಂದು ಗುರುತಿಸಲಾಗಿದೆ. ನಾಲ್ಕನೇ ಆರೋಪಿಯನ್ನು ವಿಕಾಸ ಗೊಂಡರ್ ನಿಸ್ಸಿಂಗ್ ಎಂದು ಗುರುತಿಸಲಾಗಿದ್ದು, ಈತ ಹರಿಯಾಣ ಮೂಲದವನು. ಆದರೆ ಬಂಧನದ ವೇಳೆ ಪೊಲೀಸರು ಆರೋಪಿಗಳಿಂದ ಯಾವುದೇ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿಲ್ಲ.
ಜೂನ್ 28 ರಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಸಹರಾನಪುರ ಜಿಲ್ಲೆಯ ದಿಯೋಬಂದ್‌ನಲ್ಲಿ ದುಷ್ಕರ್ಮಿಗಳು ಆಜಾದ್ ಅವರ ಕಾರಿನ ಮೇಲೆ ಗುಂಡು ಹಾರಿಸಿದಾಗ ಅವರ ಹೊಟ್ಟೆಗೆ ಗುಂಡು ತಗುಲಿತ್ತು.
ದಾಳಿಯ ನಂತರ, ಚಂದ್ರಶೇಖರ ಆಜಾದ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್‌ಗೆ ಸಂಬಂಧಿಸಿದಂತೆ ವ್ಯಕ್ತಿಯನ್ನು ಬಂಧಿಸಲಾಯಿತು. ಫೇಸ್‌ಬುಕ್ ಪೇಜ್‌ನಲ್ಲಿ ಆಜಾದ್‌ಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ಅರಿತು ಪೊಲೀಸರು ಗುರುವಾರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506 ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಮೇಥಿಯ ಪೊಲೀಸ್ ವರಿಷ್ಠಾಧಿಕಾರಿ ಎಳಮಾರನ್ ಜಿ ಹೇಳಿದ್ದಾರೆ.
ಪೋಸ್ಟ್‌ಗೆ ಸಂಬಂಧಿಸಿದಂತೆ ವಿಮಲೇಶ ಸಿಂಗ್ (30) ಎಂಬಾತನನ್ನು ಗುರುವಾರ ಬಂಧಿಸಲಾಗಿದೆ.
ಪೋಲೀಸರ ಪ್ರಕಾರ, ಪ್ರಾಥಮಿಕವಾಗಿ, ಸಿಂಗ್ ಆಜಾದ್ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದು ಕಂಡುಬಂದಿಲ್ಲ, ಆದರೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದ ಮಮತಾ ಬ್ಯಾನರ್ಜಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement