ವಿರೋಧ ಪಕ್ಷದ ನಾಯಕರು ಬೇಕಾಗಿದ್ದಾರೆ : ಟ್ವೀಟ್‌ನಲ್ಲಿ ಬಿಜೆಪಿ ಲೇವಡಿ ಮಾಡಿದ ಕಾಂಗ್ರೆಸ್‌

ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ಇನ್ನೂ ಆಗದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕ ಬಿಜೆಪಿ ಕಾಲೆಳೆದಿದೆ. ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಎಂದು ಟ್ವೀಟ್ ಮಾಡಿದ್ದು, ವಿಪಕ್ಷ ನಾಯಕನ ಆಯ್ಕೆ ಇನ್ನೂ ಆಗದಿರುವ ಕುರಿತು ಬಿಜೆಪಿ ಬಗ್ಗೆ ಲೇವಡಿ ಮಾಡಿದೆ.
ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು, ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಎರುಡು ತಿಂಗಳ ಸನಿಹಕ್ಕೆ ಬಂತು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ವಹಿಸಿಕೊಂಡು ಒಂದು ತಿಂಗಳು ಮೇಲಾಗಿದೆ. ಆದರೆ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡಿಲ್ಲ. ಇದನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಟ್ವೀಟ್‌ ಮೂಲಕ ಬಿಜೆಪಿಯನ್ನು ಟೀಕಿಸಿದೆ.

ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ. ರಾಜ್ಯ ಬಿಜೆಪಿ ಆಡಳಿತ ಮಾಡಲು ಯೋಗ್ಯವಲ್ಲ ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ. ಈಗ ವಿರೋಧ ಪಕ್ಷವಾಗಿರಲೂ ಸಹ ನಾಲಾಯಕ್ ಎಂದು ತಿಳಿಯುತ್ತಿದೆ. ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನ ಎದುರು ನೋಡುತ್ತಿದ್ದೇವೆ. ನಮ್ಮ ಆಸೆ ಈಡೇರುತ್ತದೋ ಇಲ್ಲವೋ ಗೊತ್ತಿಲ್ಲ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿ ವ್ಯಂಗ್ಯವಾಡಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

ಅಲ್ಲದೆ ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಟ್ವೀಟ್‌ ಮಾಡಿಯೂ ಲೇವಡಿ ಮಾಡಿದೆ.
* ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
* ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.
* ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿ ಬಿಜೆಪಿ ಬಗ್ಗೆ ವ್ಯಂಗ್ಯವಾಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement