ಶಿರಸಿ: ಆನ್​ಲೈನ್​​ ಗೇಮ್​​ನಲ್ಲಿ ಸುಮಾರು 65 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಶಿರಸಿ: ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕುಳವೆ ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ.
ಶಿರಸಿ ತಾಲೂಕಿನ ಬಾಳೆತೋಟ ನಿವಾಸಿ ವಿಜೇತ ಶಾಂತಾರಾಮ ಹೆಗಡೆ (37) ಆತ್ಮಹತ್ಯೆಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಈತ ಆನ್ ಲೈನ್ ಗೇಮ್ ಚಟಕ್ಕೆ ಬಲಿಯಾಗಿ ಸುಮಾರು 65 ಲಕ್ಷ ರೂ. ಕಳೆದುಕೊಂಡಿದ್ದು, ಈ ಕಾರಣಕ್ಕೆ ಬೆಂಗಳೂರು ತೊರೆದು ಶಿರಸಿಯ ತನ್ನ ಊರಾದ ಬಾಳೆತೋಟಕ್ಕೆ ಬಂದು ಉಳಿದುಕೊಂಡಿದ್ದ ಎಂದು ಹೇಳಲಾಗಿದೆ. ಶುಕ್ರವಾರ ರಾತ್ರಿ ಬೆಂಗಳೂರಿಗೆ ತೆರಳುತ್ತೇನೆಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ಬೆಂಗಳೂರಿಗೆ ತೆರಳದೆ ಕುಳವೆ ಅರಣ್ಯ ಪ್ರದೇಶದಲ್ಲಿ ನೇಣಿಗೆ ಶರಣಾಗಿದ್ದಾನೆ. ಹಣ ತೀರಿಸಲು ಒತ್ತಡ ಬಂದ ಕಾರಣ ಬೇರೆ ಮಾರ್ಗವಿಲ್ಲದೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಕುಟುಂಬಸ್ಥರು ಬೆಳಿಗ್ಗೆ ಗ್ರಾಮೀಣ ಠಾಣೆಗೆ ನಾಪತ್ತೆ ಪ್ರಕರಣ ನೀಡಲು ಆಗಮಿಸಿದಾಗ ಪೊಲೀಸರು ಮೊಬೈಲ್ ಲೊಕೇಶನ್ ಪತ್ತೆ ಹಚ್ಚಿದಾಗ ಕುಳವೆ ಅರಣ್ಯ ಪ್ರದೇಶದಲ್ಲಿ ಮೊಬೈಲ್ ಇರುವಿಕೆ ಪತ್ತೆಯಾಗಿದೆ. ಅಲ್ಲಿಗೆ ತೆರಳಿದಾಗ ಮರಕ್ಕೆ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವುದು ಕಂಡುಬಂದಿದೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement