ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಮ್ಮ ಪಕ್ಷದ ವಿರೋಧವಿಲ್ಲ : ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ

ನವದೆಹಲಿ: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಮ್ಮ ಪಕ್ಷದ ವಿರೋಧವಿಲ್ಲ ಎಂದು ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಭಾನುವಾರ ಹೇಳಿದ್ದಾರೆ.
ಏಕರೂಪ ನಾಗರಿಕ ಸಂಹಿತೆಯನ್ನು ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ. ಆದರೆ ಅದನ್ನು ಹೇರುವುದನ್ನು ಸಂವಿಧಾನ ಬೆಂಬಲಿಸುವುದಿಲ್ಲ. ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಸಂಬಂಧಿಸಿದ ಎಲ್ಲಾ ಆಯಾಮಗಳನ್ನು ಬಿಜೆಪಿ ಪರಿಗಣಿಸಬೇಕು ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
“ನಮ್ಮ ಪಕ್ಷ (ಬಿಎಸ್‌ಪಿ) ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನಕ್ಕೆ ವಿರುದ್ಧವಾಗಿಲ್ಲ ಆದರೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಬಿಜೆಪಿ ಪ್ರಯತ್ನಿಸುತ್ತಿರುವ ವಿಧಾನವನ್ನು ನಾವು ಬೆಂಬಲಿಸುವುದಿಲ್ಲ, ಈ ವಿಷಯವನ್ನು ರಾಜಕೀಯಗೊಳಿಸುವುದು ಮತ್ತು ದೇಶದಲ್ಲಿ ಅದನ್ನು ಬಲವಂತವಾಗಿ ಜಾರಿಗೊಳಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಪ್ರತಿಯೊಂದು ಸಂದರ್ಭದಲ್ಲೂ ಒಂದೇ ಕಾನೂನು ಎಲ್ಲಾ ಧರ್ಮದ ಜನರಿಗೆ ಅನ್ವಯಿಸಿದರೆ, ಅದು ದೇಶವನ್ನು ಬಲಪಡಿಸುತ್ತದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥರು ಪ್ರತಿಪಾದಿಸಿದ್ದಾರೆ.
ಜುಲೈ 3 ರಂದು ಏಕರೂಪ ನಾಗರಿಕ ಸಂಹಿತೆಯ ಸಂಸದೀಯ ಸ್ಥಾಯಿ ಸಮಿತಿಯ ಚರ್ಚೆಗೆ ಮುನ್ನ ಆಕೆಯ ಹೇಳಿಕೆ ಬಂದಿದೆ.

ಪ್ರಮುಖ ಸುದ್ದಿ :-   ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ; ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ಆರ್‌ಜೆಡಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement