ತೆಲಂಗಾಣ ಸಿಎಂ ಪಕ್ಷ ಇರುವ ವಿಪಕ್ಷಗಳ ಒಕ್ಕೂಟವನ್ನು ಕಾಂಗ್ರೆಸ್ ಸೇರುವುದಿಲ್ಲ : ರಾಹುಲ್ ಗಾಂಧಿ ಘೋಷಣೆ

ಖಮ್ಮಂ: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅವರ ರಿಮೋಟ್ ಕಂಟ್ರೋಲ್ ಪ್ರಧಾನಿ ನರೇಂದ್ರ ಮೋದಿ ಬಳಿ ಇದೆ ಎಂದು ಭಾನುವಾರ ಹೇಳಿದ್ದಾರೆ. ಅಲ್ಲದೆ, ತೆಲಂಗಾಣದ ಆಡಳಿತ ಪಕ್ಷವಾದ ಬಿಆರ್‌ ಎಸ್‌ ಅನ್ನು ಬಿಜೆಪಿಯ ಬಿ-ಟೀಮ್ ಎಂದು ಹೇಳಿದ್ದಾರೆ ಮತ್ತು ‘ಬಿಜೆಪಿ ರಿಶ್ತೇದಾರ್ ಸಮಿತಿ’ ಎಂದು ಕರೆದಿದ್ದಾರೆ.
ಕೆ.ಚಂದ್ರಶೇಖರ ರಾವ್ ಮತ್ತು ಅವರ ಪಕ್ಷದ ನಾಯಕರ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಅವರನ್ನು ಬಿಜೆಪಿ‌ ಎದುರು ಅಧೀನರನ್ನಾಗಿ ಮಾಡಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದರು ಮತ್ತು ಬಿಆರ್‌ಎಸ್ (ಭಾರತ್ ರಾಷ್ಟ್ರ ಸಮಿತಿ) ಒಳಗೊಂಡಿರುವ ಯಾವುದೇ ಬಣ ಅಥವಾ ಮೈತ್ರಿಕೂಟವನ್ನು ಕಾಂಗ್ರೆಸ್ ಸೇರುವುದಿಲ್ಲ ಎಂದು ಇತರ ಎಲ್ಲ ವಿರೋಧ ಪಕ್ಷದ ನಾಯಕರಿಗೆ ತಾನು ಹೇಳಿದ್ದೇನೆ ಎಂದರು.
ಖಮ್ಮಂನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಬಿಆರ್‌ಎಸ್ ಬಿಜೆಪಿ ರಿಶ್ತೇದಾರ್ ಸಮಿತಿಯಂತೆ, ಕೆಸಿಆರ್ ಅವರು ತಾವು ರಾಜ ಮತ್ತು ತೆಲಂಗಾಣ ತಮ್ಮ ಸಾಮ್ರಾಜ್ಯ ಎಂದು ಭಾವಿಸುತ್ತಾರೆ” ಎಂದು ಹೇಳಿದರು.
ಸಂಸತ್ತಿನಲ್ಲಿ ಕಾಂಗ್ರೆಸ್ ಯಾವಾಗಲೂ ಬಿಜೆಪಿ ವಿರುದ್ಧ ನಿಂತಿದೆ, ಆದರೆ ಕೆಸಿಆರ್ ಅವರ ಪಕ್ಷವು “ಬಿಜೆಪಿಯ ಬಿ-ಟೀಮ್” ಎಂದು ಹೇಳಿದರು. “ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ರಿಮೋಟ್ ಕಂಟ್ರೋಲ್ ಹೊಂದಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.
ಭ್ರಷ್ಟ ಮತ್ತು ಬಡವರ ವಿರೋಧಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇತ್ತೀಚೆಗೆ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಹೋರಾಡಿದೆ ಮತ್ತು ನಾವು ತೆಲಂಗಾಣದಲ್ಲಿ ಬಡವರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ತುಳಿತಕ್ಕೊಳಗಾದವರ ಬೆಂಬಲದೊಂದಿಗೆ ಅವರನ್ನು ಸೋಲಿಸುತ್ತೇವೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’...

“ತೆಲಂಗಾಣದಲ್ಲಿ ಒಂದು ಕಡೆ ರಾಜ್ಯದ ಶ್ರೀಮಂತರು ಮತ್ತು ಶಕ್ತಿಯುತರು ಇರುತ್ತಾರೆ ಮತ್ತು ಇನ್ನೊಂದು ಬದಿಯಲ್ಲಿ ನಮ್ಮೊಂದಿಗೆ ಬಡವರು, ಬುಡಕಟ್ಟುಗಳು, ಅಲ್ಪಸಂಖ್ಯಾತರು, ರೈತರು ಮತ್ತು ಸಣ್ಣ ಅಂಗಡಿಗಳವರು ಇರುತ್ತಾರೆ. ಕರ್ನಾಟಕದಲ್ಲಿ ಏನಾಯಿತು, ತೆಲಂಗಾಣದಲ್ಲಿ ಅದು ಪುನರಾವರ್ತನೆಯಾಗುತ್ತದೆ ಎಂದರು.
ತೆಲಂಗಾಣದಲ್ಲಿ ಟಿಆರ್‌ಎಸ್ (ಈಗ ಬಿಆರ್‌ಎಸ್ ಆಗಿರುವ ತೆಲಂಗಾಣ ರಾಷ್ಟ್ರ ಸಮಿತಿ), ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಹೋರಾಟವಿದೆ ಎಂದು ಈ ಹಿಂದೆ ಹೇಳಲಾಗಿತ್ತು ಎಂದು ಕಾಂಗ್ರೆಸ್ ನಾಯಕ ಹೇಳಿದರು. ಆದರೆ ತೆಲಂಗಾಣದಲ್ಲಿ ಬಿಜೆಪಿ ಅಸ್ತಿತ್ವದಲ್ಲಿಲ್ಲ, ಹೀಗಾಗಿ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಬಿ-ಟೀಮ್ ನಡುವಿನ ಹೋರಾಟವಾಗಿದೆ” ಎಂದು ಅವರು ಹೇಳಿದರು.
2024ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಇತ್ತೀಚಿನ ಪ್ರಯತ್ನಗಳನ್ನು ಉಲ್ಲೇಖಿಸಿದ ಅವರು “ಟಿಆರ್‌ಎಸ್ ಸಭೆಯಲ್ಲಿ ಭಾಗವಹಿಸಿದರೆ ಕಾಂಗ್ರೆಸ್ ಭಾಗವಹಿಸುವುದಿಲ್ಲ ಎಂದು ನಾವು ಇತರ ವಿರೋಧ ಪಕ್ಷದ ನಾಯಕರಿಗೆ ಹೇಳಿದ್ದೇವೆ ಕಾಂಗ್ರೆಸ್ ಟಿಆರ್‌ಎಸ್‌ನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ಬಿಹಾರದ ಪಾಟ್ನಾದಲ್ಲಿ ಹತ್ತಕ್ಕೂ ಹೆಚ್ಚು ವಿರೋಧ ಪಕ್ಷಗಳು ಇತ್ತೀಚೆಗೆ ಸಭೆ ನಡೆಸಿದವು ಮತ್ತು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಮತ್ತೆ ಸಭೆ ನಡೆಸಲಿವೆ. BRS ಮತ್ತು ಇತರ ಕೆಲವು ಬಿಜೆಪಿಯೇತರ ಪಕ್ಷಗಳು ಈ ಒಕ್ಕೂಟದ ಭಾಗವಾಗಿಲ್ಲ.
ಭಾರತ ಜೋಡೋ ಯಾತ್ರೆಯ ಸಂದರ್ಭದಲ್ಲಿ ನಮಗೆ ಇಲ್ಲಿಂದ (ತೆಲಂಗಾಣ) ಭಾರಿ ಬೆಂಬಲ ಸಿಕ್ಕಿದೆ ಮತ್ತು ಅದಕ್ಕಾಗಿ ನಾನು ನಿಮಗೆಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ಹೇಳಿದರು.
ಯಾತ್ರೆಯ ಸಂದರ್ಭದಲ್ಲಿ ನಾವು ದೇಶವನ್ನು ಒಗ್ಗೂಡಿಸುವ ಬಗ್ಗೆ ಮಾತನಾಡಿದ್ದೇವೆ, ಒಂದು ಕಡೆ ದೇಶವನ್ನು ಒಗ್ಗೂಡಿಸಲು ಒಂದು ಸಿದ್ಧಾಂತವನ್ನು ಅನುಸರಿಸುತ್ತೇವೆ ಮತ್ತು ಇನ್ನೊಂದು ಕಡೆ ದೇಶವನ್ನು ಒಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು.
ಇಡೀ ದೇಶವೇ ಯಾತ್ರೆಗೆ ಬೆಂಬಲ ನೀಡಿದ್ದು, ಈ ದೇಶದಲ್ಲಿ ದ್ವೇಷ ಸಾಧಿಸಲು ಬಿಡುವುದಿಲ್ಲ. ನಮ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿರುವ ಕಾಂಗ್ರೆಸ್‌ಗೆ ಖಮ್ಮಂ ಯಾವಾಗಲೂ ಬೆಂಬಲ ನೀಡುತ್ತಿದೆ. ಇಂದು ಕಾಂಗ್ರೆಸ್ ಸೇರಲು ನಿರ್ಧರಿಸಿರುವ ನಾಯಕರನ್ನು ನಾನು ಸ್ವಾಗತಿಸುತ್ತೇನೆ. ಆದರೆ ಮುಖ್ಯವಾಗಿ ನಾನು ನಮ್ಮ ಸಿಂಹಗಳಂತಿರುವ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಬಿಆರ್‌ಎಸ್ ನಿಮ್ಮೆಲ್ಲರ ಮೇಲೆ ದಾಳಿ ಮಾಡಿದೆ ಆದರೆ ಯಾರೂ ಹೆದರಲಿಲ್ಲ ಎಂದು ಅವರು ಪಕ್ಷದ ಕಾರ್ಯಕರ್ತರಿಗೆ ಹೇಳಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಚುನಾವಣಾ ಆಯೋಗದಿಂದ 8,889 ಕೋಟಿ ರೂ.ಮೌಲ್ಯದ ವಸ್ತುಗಳ ವಶ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement