ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆರೆಂಜ್‌-ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಜುಲೈ 4ರಿಂದ ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜುಲೈ 3ರಿಂದ 6ರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಜುಲೈ 5ರಂದು ಅತಿ ಹೆಚ್ಚು ಮಳೆಯಾಗಲಿದ್ದು, ಆ ದಿನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಜುಲೈ 4ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹಾಗೂ ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ.
ಉತ್ತರ ಕರ್ನಾಟಕದಲ್ಲಿಯೂ ಉತ್ತಮ ಮಳೆಯಾಗಲಿದ್ದು, ಜುಲೈ 3 ಹಾಗೂ 4 ರಂದು ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಹಾಗೂ ಜುಲೈ 5 ರಂದು ಬೀದರ, ಗದಗ ಹಾಗೂ ಕಲಬುರ್ಗಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ.

ಪ್ರಮುಖ ಸುದ್ದಿ :-   ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement