ಮುಂಬೈ: ಲೋಕಸಭಾ ಸದಸ್ಯ ಸುನೀಲ್ ತತ್ಕರೆ ಅವರನ್ನು ಮಹಾರಾಷ್ಟ್ರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಘಟಕದ ಮುಖ್ಯಸ್ಥರನ್ನಾಗಿ ಅಜಿತ ಪವಾರ್ ಬಣ ಸೋಮವಾರ ನೇಮಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಂಡಾಯ ಎನ್‌ಸಿಪಿ ಬಣದ ಭಾಗವಾಗಿರುವ ಪ್ರಫುಲ್ ಪಟೇಲ್, ಜಯಂತ್ ಪಾಟೀಲ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿದೆ ಮತ್ತು ಸುನೀಲ್ ತತ್ಕರೆ ಅವರನ್ನು ಪಕ್ಷದ ರಾಜ್ಯ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಯಂತ್ ಪಾಟೀಲ ಅವರನ್ನು ಇಂದು ರಾಜ್ಯಾಧ್ಯಕ್ಷ ಸ್ಥಾನದಿಂದ ಪದಚ್ಯುತಿ ಮಾಡಿರುವ ಬಗ್ಗೆ ಅಧಿಕೃತವಾಗಿ ತಿಳಿಸಿದ್ದೇನೆ. ಮತ್ತು ನಾನು ಸುನೀಲ ತತ್ಕರೆ ಅವರನ್ನು ಮಹಾರಾಷ್ಟ್ರದ ಎನ್‌ಸಿಪಿ ಅಧ್ಯಕ್ಷರನ್ನಾಗಿ ನೇಮಿಸಿದ್ದೇನೆ ಎಂದು ಪ್ರಫುಲ್ ಪಟೇಲ್ ಹೇಳಿದ್ದಾರೆ.
ಜಯಂತ ಪಾಟೀಲ ಅವರು ತಕ್ಷಣವೇ ಸುನೀಲ್ ತಟ್ಕರೆ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಬೇಕು ಎಂದು ಹೇಳಿದ ಅವರು, “ಮಹಾರಾಷ್ಟ್ರದಲ್ಲಿ ಎಲ್ಲಾ ನಿರ್ಧಾರಗಳನ್ನು ಸಂಪೂರ್ಣವಾಗಿ ಸುನಿಲ್ ತತ್ಕರೆ ಅವರು ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಅಜಿತ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ನಾವು ನಮ್ಮ ನಿರ್ಧಾರದ ಬಗ್ಗೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಅವರಿಗೆ ತಿಳಿಸಿದ್ದೇವೆ” ಎಂದು ಎನ್‌ಸಿಪಿ ನಾಯಕ ಹೇಳಿದರು.
ಈಗ ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷರು ಯಾರು ಎಂಬ ಪ್ರಶ್ನೆಗೆ ಅಜಿತ್ ಪವಾರ್ ಪ್ರತಿಕ್ರಿಯಿಸಿದ್ದು, ಶರದ್ ಪವಾರ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂಬುದನ್ನು ಮರೆತಿದ್ದೀರಾ ಎಂದು ಕೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ