ಬಂಡಾಯದ ನಂತರ ಅಜಿತ ಪವಾರ್, ಇತರ 8 ಜನರ ಅನರ್ಹತೆಗೆ ಕೋರಿ ಅರ್ಜಿ ಸಲ್ಲಿಸಿದ ಎನ್‌ಸಿಪಿ

ಮುಂಬೈ: ಏಕನಾಥ ಶಿಂಧೆ ನೇತೃತ್ವದ ರಾಜ್ಯ ಸರ್ಕಾರ ಸೇರುವ ಮೂಲಕ ಪಕ್ಷವನ್ನು ಬಿಕ್ಕಟ್ಟಿಗೆ ದೂಡಿರುವ ಅಜಿತ ಪವಾರ್ ಅವರನ್ನು ಮಹಾರಾಷ್ಟ್ರ ವಿಧಾನಸಭೆಯಿಂದ ಅನರ್ಹಗೊಳಿಸಬೇಕು ಎಂದು ಕೋರಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಇಂದು (ಜುಲೈ ೩) ಮಹಾರಾಷ್ಟ್ರ ಸ್ಪೀಕರ್‌ ಅವರಿಗೆ ಮನವಿ ಸಲ್ಲಿಸಲಿದೆ.
ನಿನ್ನೆ, ಭಾನುವಾರ ಶಿವಸೇನೆ-ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಿತ್ ಪವಾರ್ ಮತ್ತು ಇತರ ಎಂಟು ಪಕ್ಷದ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಎನ್‌ಸಿಪಿ ಮನವಿ ಸಲ್ಲಿಸಲಿದೆ.
1999 ರಲ್ಲಿ ಎನ್‌ಸಿಪಿ ಸ್ಥಾಪಿಸಿದ ಶರದ್ ಪವಾರ್ ಅವರು ಪಕ್ಷದ ಮುಖ್ಯಸ್ಥರಾಗಿ ಮುಂದುವರೆದಿದ್ದಾರೆ ಮತ್ತು ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪಕ್ಷವು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿ) ಪತ್ರ ಬರೆದಿದೆ. ಅಜಿತ ಪವಾರ್ ಗುಂಪಿನ ಯಾವುದೇ ವಿನಂತಿ ಮೇರೆಗೆ ಕಾರ್ಯನಿರ್ವಹಿಸುವ ಮೊದಲು ತಮ್ಮ ಅಭಿಪ್ರಾಯವನ್ನು ಚುನಾವಣಾ ಸಂಸ್ಥೆ ಆಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸುಮಾರು ಒಂದು ತಿಂಗಳ ಹಿಂದೆ ಶರದ್ ಪವಾರ್ ಅವರಿಂದ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಎನ್‌ಸಿಪಿಯ ಹಿರಿಯ ನಾಯಕ ಪ್ರಫುಲ್ ಪಟೇಲ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡ ಅಜಿತ್ ಪವಾರ್ ಅವರು ಪ್ರಾಯೋಗಿಕವಾಗಿ ಇಡೀ ಪಕ್ಷದ ಬೆಂಬಲ ತಮಗಿದೆ ಎಂದು ಹೇಳಿಕೊಂಡಿದ್ದಾರೆ. ಶಿವಸೇನೆಯಲ್ಲಿನ ವಿಭಜನೆಯ ನಂತರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಂತೆಯೇ ಅವರು ಪಕ್ಷದ ಹೆಸರು ಮತ್ತು ಚಿಹ್ನೆಯ ಮೇಲೆ ಹಕ್ಕನ್ನು ಪ್ರತಿಪಾದಿಸಿದರು.

ಪ್ರಮುಖ ಸುದ್ದಿ :-   ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಕ್ಕೆ ವಿರೋಧ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಪಕ್ಷದ ರಾಷ್ಟ್ರೀಯ ವಕ್ತಾರೆ ರಾಧಿಕಾ ಖೇರಾ

ಅಜಿತ ಪವಾರ್ ಅವರ ಮುಂದಿನ ನಡೆ ಚುನಾವಣಾ ಆಯೋಗಕ್ಕೆ ತೆರಳಿ ತಮ್ಮ ಗುಂಪು ಮೂಲ ಎನ್‌ಸಿಪಿ ಎಂದು ಸಾಬೀತುಪಡಿಸುವುದು. ರಾಜ್ಯ ವಿಧಾನಸಭೆಯಲ್ಲಿ ಎನ್‌ಸಿಪಿಯ ಒಟ್ಟು 53 ಶಾಸಕರ ಪೈಕಿ 40ಕ್ಕೂ ಹೆಚ್ಚು ಶಾಸಕರ ಬೆಂಬಲವನ್ನು ಅಜಿತ್ ಪವಾರ್ ಹೊಂದಿರುವುದಾಗಿ ಹೇಳಿಕೊಂಡಿದ್ದಾರೆ.
ಅಣ್ಣನ ಮಗನ ಈ ದೊಡ್ಡ ಬದಲಾವಣೆಗೆ ಪ್ರತಿಕ್ರಿಯಿಸಿದ ಶರದ್ ಪವಾರ್, ಪಕ್ಷದಲ್ಲಿ ಹೊಸ ನಾಯಕತ್ವವನ್ನು ತರುವುದಾಗಿ ಹೇಳಿದ್ದಾರೆ. ಕುಟುಂಬದಲ್ಲಿ ಯಾವುದೇ ಸಮಸ್ಯೆ ಇಲ್ಲ. ನಾವು ಕುಟುಂಬದಲ್ಲಿ ರಾಜಕೀಯವನ್ನು ಚರ್ಚಿಸುವುದಿಲ್ಲ. ಪ್ರತಿಯೊಬ್ಬರೂ ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ” ಎಂದು ಪವಾರ್ ಹೇಳಿದರು.
ಇತ್ತೀಚೆಗೆ ಬಡ್ತಿ ಪಡೆದು ಎನ್‌ಸಿಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಪ್ರಫುಲ್ ಪಟೇಲ್ ಮತ್ತು ಸುನೀಲ್ ತತ್ಕರೆ ಅವರು ಪಕ್ಷದ ಮಾರ್ಗಸೂಚಿಗಳನ್ನು ತೊರೆದು “ತಪ್ಪು ದಾರಿ” ಹಿಡಿದಿದ್ದಾರೆ ಎಂದು ಪವಾರ್ ಆರೋಪಿಸಿದ್ದಾರೆ.
ಶರದ್ ಪವಾರ್ ಅವರ ಪುತ್ರಿಯೂ ಆಗಿರುವ ಪಕ್ಷದ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ, ಪಕ್ಷದಲ್ಲಿನ ಬೆಳವಣಿಗೆಗಳು ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟಿನ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ. ಅಜಿತ್ ಪವಾರ್ ವಿಭಿನ್ನ ದೃಷ್ಟಿಕೋನಗಳನ್ನು ಹೊಂದಿರಬಹುದು, ಆದರೆ ಅವರು “ಯಾವಾಗಲೂ ಅವರನ್ನು ಸಹೋದರ ಎಂದು ಪ್ರೀತಿಸುವುದಾಗಿ ಹೇಳಿದ್ದಾರೆ. “ನನ್ನ ಸಹೋದರನೊಂದಿಗೆ ನಾನು ಎಂದಿಗೂ ಜಗಳವಾಡಲು ಸಾಧ್ಯವಿಲ್ಲ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಪರಿಸ್ಥಿತಿಯನ್ನು ಗಮನಿಸುತ್ತಿರುವ ಕಾಂಗ್ರೆಸ್ ಶರದ್ ಪವಾರ್ ಅವರ ಜೊತೆ ಪಕ್ಷವು ನಿಂತಿದೆ ಎಂದು ಹೇಳಿದೆ. ದೇಶದ ಅತ್ಯಂತ ಚಾಣಾಕ್ಷ ರಾಜಕಾರಣಿಗಳಲ್ಲಿ ಒಬ್ಬರಾದ ಶರದ್ ಪವಾರ್ ಅವರು ಜನತಾ ನ್ಯಾಯಾಲಯದಲ್ಲಿ ಹೋರಾಟ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪೃಥ್ವಿರಾಜ ಚವಾಣ್ ಪ್ರತಿಪಾದಿಸಿದ್ದಾರೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಶಿವಸೇನೆ-ಬಿಜೆಪಿ ಸರ್ಕಾರದ ಜೊತೆ ಕೈಜೋಡಿಸಿದ ನಂತರ ನಿನ್ನೆ ಎನ್‌ಸಿಪಿ ಲಂಬವಾದ ವಿಭಜನೆ ಅನುಭವಿಸಿತು. ಅಜಿತ ಪವಾರ್‌ ಅವರು ಉಪಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ತಮ್ಮ ಸ್ಥಾನವನ್ನು ಹಂಚಿಕೊಳ್ಳಲಿದ್ದಾರೆ. ಛಗನ್ ಭುಜಬಲ್ ಮತ್ತು ದಿಲೀಪ್ ವಾಲ್ಸೆ ಪಾಟೀಲ ಅವರಂತಹ ಕಟ್ಟಾ ಶರದ್ ಪವಾರ್ ನಿಷ್ಠಾವಂತರು ಸೇರಿದಂತೆ ಇತರ ಎಂಟು ಎನ್‌ಸಿಪಿ ಶಾಸಕರನ್ನು ಸಹ ಸಚಿವರನ್ನಾಗಿ ಮಾಡಲಾಯಿತು.
ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಪರ್ಯಾಯವಾಗಿ ಅಜಿತ ಪವಾರ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಉದ್ಧವ್ ಠಾಕ್ರೆ ಶಿಬಿರ ಹೇಳಿಕೊಂಡಿದೆ. ‘ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಶಿವಸೇನೆಯ ಬಂಡಾಯ ಶಾಸಕರನ್ನು ಶೀಘ್ರದಲ್ಲೇ ಅನರ್ಹಗೊಳಿಸಲಾಗುತ್ತದೆ ಮತ್ತು ಅಜಿತ್ ಪವಾರ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಲಾಗುತ್ತದೆ’ ಎಂದು ಮುಖವಾಣಿ ‘ಸಾಮ್ನಾ’ದ ಸಂಪಾದಕೀಯ ಹೇಳಿದೆ.

ಪ್ರಮುಖ ಸುದ್ದಿ :-   ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ, ಹಣದ ರಾಶಿ ನೋಡಿ ಇ.ಡಿ.ಯೇ ದಂಗು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement