ಮಂಗಳವಾರ ಮಹಾರಾಷ್ಟ್ರದ ಧುಲೆಯಲ್ಲಿ ಹೆದ್ದಾರಿ ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ನಂತರ ಹೋಟೆಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ರಾಜಧಾನಿ ಮುಂಬೈನಿಂದ ಸುಮಾರು 300-ಕಿಮೀ ದೂರದಲ್ಲಿರುವ ಧುಲೆ ಜಿಲ್ಲೆಯ ಮುಂಬೈ-ಆಗ್ರಾ ಹೆದ್ದಾರಿಯ ಪಲಾಸ್ನರ್ ಗ್ರಾಮದ ಬಳಿ ಮಂಗಳವಾರ ಮಧ್ಯಾಹ್ನದ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಕಂಟೈನರ್ ಹೊಟೇಲಿಗೆ ಡಿಕ್ಕಿ ಹೊಡೆಯುವ ಮೊದಲು ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಟ್ರಕ್‌ನ ಬ್ರೇಕ್ ವಿಫಲವಾಗಿದೆ, ಅದರ ನಂತರ ಅದರ ಚಾಲಕ ಟ್ರಕ್ ಮೇಲೆ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ ಎಂದು ಹೇಳಲಾಗಿದೆ.
ಎರಡು ದ್ವಿಚಕ್ರವಾಹನ, ಒಂದು ಕಾರು ಹಾಗೂ ಇನ್ನೊಂದು ಕಂಟೈನರ್‌ಗೆ ಹಿಂಬದಿಗೆ ಡಿಕ್ಕಿ ಹೊಡೆದಿದೆ. ನಂತರ ಟ್ರಕ್ ಹೆದ್ದಾರಿಯಲ್ಲಿ ಬಸ್ ನಿಲ್ದಾಣದ ಬಳಿ ಇರುವ ಹೋಟೆಲ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಟ್ರಕ್ ಮಧ್ಯಪ್ರದೇಶದಿಂದ ಧುಲೆ ಕಡೆಗೆ ಹೋಗುತ್ತಿತ್ತು. ಮೃತಪಟ್ಟವರಲ್ಲಿ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದವರಲ್ಲಿ ಕೆಲವರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಶಿರ್‌ಪುರ ಮತ್ತು ಧುಲೆ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ