ಈ ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ: ರೆಡ್ ಅಲರ್ಟ್-ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು : ನಾಳೆ ಬೆಳಗ್ಗಿನವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಜುಲೈ 5ರ ಬೆಳಗ್ಗೆ 8:30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ನಿನ್ನೆಯಿಂದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಇದು ಮುಂದಿನ ನಾಲ್ಕು ದಿನಗಳ ಕಾಲ ಮುಂದುವರಿಯಬಹುದು ಎಂಬ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ಜುಲೈ 5ರ ಬೆಳಗ್ಗೆ 8:30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 5ರ ಬೆಳಗ್ಗೆ 8:30ರಿಂದ ಜುಲೈ 6ರ 8:30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 8ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಲಾಗಿದೆ.
ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹಾಗೆಯೇ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಮಣಿಪಾಲದ ಮುಖ್ಯ ರಸ್ತೆಯ ಪಕ್ಕದಲ್ಲಿದ್ದ ಗುಡ್ಡವೊಂದು ಮಂಗಳವಾರ ಕುಸಿದಿದೆ. ಗುಡ್ಡದ ಮಣ್ಣು ರಸ್ತೆಗೆ ಬಿದ್ದಿದೆ. ಬೆಟ್ಟದ ಮೇಲೆ ಕಟ್ಟಡಗಳಿವೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಹಾಗೂ ಹೊನ್ನಾವರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ವರದಿಯಾಗಿದೆ. ಉಳಿದಂತೆ ಕುಮಟಾ, ಕಾರವಾರ ಹಾಗೂ ಅಂಕೋಲಾ ತಾಲೂಕುಗಳಲ್ಲಿಯೂ ಮಳೆಯಾಗುತ್ತಿದೆ.

ಪ್ರಮುಖ ಸುದ್ದಿ :-   ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement